ಕೋಲ್ಕತ್ತ: ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಸಮನ್ವಯ ಸಮಿತಿ ಸಭೆಯ ದಿನವೇ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯದ (ಇಡಿ) ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಯ ಪ್ರಧಾನ ಕಾರ್ಯದರ್ಶಿಅಭಿಷೇಕ್ ಬ್ಯಾನರ್ಜಿ ಕಿಡಿ ಕಾರಿದ್ದಾರೆ.
.ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ಎವಿಜಿಸಿ ನೀತಿ: ಅಶ್ವತ್ಥನಾರಾಯಣ.
‘56-ಇಂಚಿನ ಎದೆಯ ಅಂಜುಬುರುಕತೆ ಮತ್ತು ನಿರ್ವಾತತೆಯನ್ನು ನೋಡಿ ಆಶ್ಚರ್ಯಪಡದೆ ಇರಲು ಸಾಧ್ಯವಿಲ್ಲ’ ಎಂದು ಅವರು ಪ್ರಧಾನಿ ಮೋದಿ ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಅವರು, ‘ಸೆ. 13ರಂದು ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿಯ ಸಭೆ ನಡೆಯಲಿದೆ. ನಾನು ಕೂಡ ಸದಸ್ಯ. ಆದರೆ ಅದೇ ದಿನ ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್ ನೀಡಿದೆ. 56-ಇಂಚಿನ ಎದೆಯ ಅಂಜುಬುರುಕತೆ ಮತ್ತು ನಿರ್ವಾತತೆಯನ್ನು ನೋಡಿ ಆಶ್ಚರ್ಯಪಡದೆ ಇರಲು ಸಾಧ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.
.Muslim Reservation: ಮುಸ್ಲಿಂ ಕೋಟಾ ರದ್ದು: ಏ. 18ರವರೆಗೂ ಜಾರಿಗೊಳಿಸದಂತೆ ಕರ್.ಕರ್ನಾಟಕ ಬಜೆಟ್ 2023: ಪ್ರಮುಖ 10 ಅಂಶಗಳು.
‘ಇಂಡಿಯಾ’ ಮೈತ್ರಿಕೂಟದ 14 ಮಂದಿಯ ಸಮನ್ವಯ ಸಮಿತಿಯ ಮೊದಲ ಸಭೆಯ ಸೆ.13 ರಂದು ದೆಹಲಿಯಲ್ಲಿ ನಡೆಯಲಿದೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ದೆಹಲಿ ನಿವಾಸದಲ್ಲಿ ಸಭೆ ನಡೆಯಲಿದ್ದು, ಮೈತ್ರಿ ಕಾರ್ಯತಂತ್ರಗಳು ಮತ್ತು ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.

ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಈಗಾಗಲೇ ಹಲವು ಬಾರಿ ಅಭಿಷೇಕ್ ಅವರಿಗೆ ಇ.ಡಿ ನೋಟಿಸ್ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.