Photos: ಬಜೆಟ್ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್, ಅವರ ತಂಡ ಕಾಣಿಸಿಕೊಂಡಿದ್ದು ಹೀಗೆ...
Published 1 ಫೆಬ್ರುವರಿ 2022, 6:05 IST Last Updated 1 ಫೆಬ್ರುವರಿ 2022, 6:05 IST ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ನಿರ್ಮಲಾ ಸೀತಾರಾಮನ್ ಅವರೊಂದಿಗೆ ಕೇಂದ್ರ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಇದ್ದರು.
ಕೇಂದ್ರದ ಬಜೆಟ್‌ಗೂ ಮುನ್ನ ರಾಷ್ಟ್ರಪತಿಗಳೊಂದಿಗೆ ಸಮಾಲೋಚನೆಯಲ್ಲಿ ತೊಡಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅವರ ತಂಡಕೇಂದ್ರದ ಬಜೆಟ್ ಮಂಡಿಸುವುದಕ್ಕೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಹಣಕಾಸು ಖಾತೆ ರಾಜ್ಯ ಸಚಿವರಾದ ಭಾಗವತ್ ಕಿಶನ್ ರಾವ್ ಕರಾಡ್, ಪಂಕಜ್ ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಜರಿದ್ದರು. ಕೇಂದ್ರದ ಬಜೆಟ್ ಮಂಡಿಸಲು ಹಣಕಾಸು ಸಚಿವಾಲಯದಿಂದ ಸಂಸತ್ತಿಗೆ ಹೊರಡುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ ಭವನದ ನಾರ್ತ್ ಬ್ಲಾಕ್ನ ಹೊರಗೆ ಬಜೆಟ್ 2022-23 ಅನ್ನು ಒಳಗೊಂಡ ಪ್ರತಿಯನ್ನು ಪ್ರದರ್ಶಿಸಿದರುಬಜೆಟ್ ಪ್ರತಿಯನ್ನು ಪ್ರದರ್ಶಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ಈ ಸಂದರ್ಭದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವರಾದ ಭಾಗವತ್ ಕಿಶನ್ ರಾವ್ ಕರಾಡ್, ಪಂಕಜ್ ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.