ADVERTISEMENT

ಪೆಟ್ರೋಲ್‌ 30 ಪೈಸೆ, ಡೀಸೆಲ್‌ 35 ಪೈಸೆ ಏರಿಕೆ

ನವದೆಹಲಿ (ಪಿಟಿಐ):
Published 10 ಅಕ್ಟೋಬರ್ 2021, 13:48 IST
Last Updated 10 ಅಕ್ಟೋಬರ್ 2021, 13:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪ‍ನಿಗಳು ಭಾನುವಾರ ಪೆಟ್ರೋಲ್‌ ದರವನ್ನು ಲೀಟರಿಗೆ 30 ಪೈಸೆ ಮತ್ತು ಡೀಸೆಲ್‌ ದರ ಲೀಟರಿಗೆ 35 ಪೈಸೆಗಳಷ್ಟು ಹೆಚ್ಚಿಸಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಗೆ ಅನುಗುಣವಾಗಿ ದೇಶದಲ್ಲಿ ಇಂಧನ ದರ ಹೆಚ್ಚಾಗುತ್ತಿದೆ.

ಭಾನುವಾರದ ದರ ಏರಿಕೆಯಿಂದಾಗಿ ಡೀಸೆಲ್‌ ದರವು ಲೀಟರಿಗೆ ₹ 100ರ ಗಡಿ ದಾಟಿರುವ ಪ್ರದೇಶಗಳ ಸಾಲಿಗೆ ಗುಜರಾತ್‌ನ ಗಾಂಧಿನಗರವೂ ಸೇರಿಕೊಂಡಿದೆ. ಗಾಂಧಿನಗರದಲ್ಲಿ ಡೀಸೆಲ್‌ ದರ ಲೀಟರಿಗೆ ₹ 100.21ರಷ್ಟಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 107.71 ಮತ್ತು ಡೀಸೆಲ್‌ ದರ ಲೀಟರಿಗೆ ₹ 98.46ಕ್ಕೆ ಏರಿಕೆ ಆಗಿದೆ. ದೆಹಲಿಯಲ್ಲಿ ಪೆಟ್ರೋಲ್‌ ದರ ₹ 104.14 ಮತ್ತು ಡೀಸೆಲ್‌ ದರ ₹ 100.66ಕ್ಕೆ ತಲುಪಿದೆ. ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗುತ್ತದೆ.

ADVERTISEMENT
ಸಾರಾಂಶ

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪ‍ನಿಗಳು ಭಾನುವಾರ ಪೆಟ್ರೋಲ್‌ ದರ ಲೀಟರಿಗೆ 30 ಪೈಸೆ ಮತ್ತು ಡೀಸೆಲ್‌ ದರ ಲೀಟರಿಗೆ 35 ಪೈಸೆಗಳಷ್ಟು ಹೆಚ್ಚಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.