ನವದೆಹಲಿ: ಚಿನ್ನ ಆಮದು ಮೌಲ್ಯವು ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ಡಿಸೆಂಬರ್ ಅವಧಿಯಲ್ಲಿ ₹ 2.81 ಲಕ್ಷ ಕೋಟಿಯಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಎರಡು ಪಟ್ಟಿಗಿಂತಲೂ ಹೆಚ್ಚು ಏರಿಕೆ ಆಗಿದೆ.
2020–21ನೇ ಹಣಕಾಸು ವರ್ಷದ ಏಪ್ರಿಲ್–ಡಿಸೆಂಬರ್ ಅವಧಿಯಲ್ಲಿ ₹ 1.24 ಲಕ್ಷ ಕೋಟಿ ಮೌಲ್ಯದ ಚಿನ್ನ ಆಮದಾಗಿತ್ತು ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.
ಚಿನ್ನದ ಆಮದು ಹೆಚ್ಚಾಗಿರುವುದರಿಂದ ವ್ಯಾಪಾರ ಕೊರತೆ ಅಂತರವು ₹ 4.54 ಲಕ್ಷ ಕೋಟಿಯಿಂದ ₹ 10.54 ಲಕ್ಷ ಕೋಟಿಗೆ ಏರಿಕೆ ಆಗಿದೆ. ಬೆಳ್ಳಿ ಆಮದು ಮೌಲ್ಯವು ₹ 5,638 ಕೋಟಿಯಿಂದ ₹ 14,800 ಕೋಟಿಗೆ ಏರಿಕೆ ಆಗಿದೆ. ಹರಳು ಮತ್ತು ಚಿನ್ನಾಭರಣ ರಫ್ತು ಶೇ 71ರಷ್ಟು ಹೆಚ್ಚಾಗಿದೆ.
ಚಿನ್ನ ಆಮದು ಮೌಲ್ಯವು ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ಡಿಸೆಂಬರ್ ಅವಧಿಯಲ್ಲಿ ಎರಡು ಪಟ್ಟಿಗಿಂತಲೂ ಹೆಚ್ಚು ಏರಿಕೆ ಆಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.