ADVERTISEMENT

ಸುಸ್ಥಿರ ಚೇತರಿಕೆ ಸರ್ಕಾರದ ಗುರಿ: ನಿರ್ಮಲಾ

Published 21 ಫೆಬ್ರುವರಿ 2022, 16:15 IST
Last Updated 21 ಫೆಬ್ರುವರಿ 2022, 16:15 IST
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್   

ಮುಂಬೈ : ಅರ್ಥ ವ್ಯವಸ್ಥೆಯ ಚೇತರಿಕೆಯು ಸುಸ್ಥಿರವಾಗಿ ಇರಬೇಕು ಎಂಬುದು ಸರ್ಕಾರದ ಬಯಕೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಮೂಲಸೌಕರ್ಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಜೆಟ್‌ನಲ್ಲಿ ಇರುವ ಪ್ರಸ್ತಾವಗಳು ಹೂಡಿಕೆ ಹೆಚ್ಚಿಸಿ, ಆದಾಯ ಹೆಚ್ಚಿಸುವಂಥವು ಎಂದು ಅವರು ಪ್ರತಿಪಾದಿಸಿದರು.

ಉದ್ಯಮದ ಪ್ರತಿನಿಧಿಗಳ ಜೊತೆ ಮಾತುಕತೆಯಲ್ಲಿ ಪಾಲ್ಗೊಂಡ ಅವರು, ‘ಸಾಂಕ್ರಾಮಿಕದ ಸಂದರ್ಭದಲ್ಲಿ ತೊಂದರೆಗೆ ಒಳಗಾದವರಿಗೆ ಹಣ ವರ್ಗಾವಣೆ ಮಾಡುವಲ್ಲಿ ತಂತ್ರಜ್ಞಾನ ನೆರವಿಗೆ ಬಂದಿದೆ. ಶಿಕ್ಷಣ ಹಾಗೂ ಕೃಷಿ ವಲಯಗಳಲ್ಲಿ ಡಿಜಿಟಲ್ ತಂತ್ರಜ್ಞಾನದ ನೆರವು ಪಡೆಯುವುದು ಹೇಗೆ ಎಂಬ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ’ ಎಂದರು.

ಸಾರಾಂಶ

ಅರ್ಥ ವ್ಯವಸ್ಥೆಯ ಚೇತರಿಕೆಯು ಸುಸ್ಥಿರವಾಗಿ ಇರಬೇಕು ಎಂಬುದು ಸರ್ಕಾರದ ಬಯಕೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ADVERTISEMENT

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.