ಲಖನೌ: 2007ರ ಗೋರಖಪುರ ಗಲಭೆ ಸಂಬಂಧ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಪದೇ ಪದೇ ಅರ್ಜಿ ಸಲ್ಲಿಸುತ್ತಿದ್ದ ವ್ಯಕ್ತಿಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ₹ 1 ಲಕ್ಷ ದಂಡ ವಿಧಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ಈ ವಿಚಾರ ಇತ್ಯರ್ಥವಾಗಿದ್ದರೂ ಕೂಡ ವ್ಯಕ್ತಿ ಪದೇ ಪದೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುತ್ತಿದ್ದರು.
ವೃತ್ತಿಯಲ್ಲಿ ಪತ್ರಕರ್ತರಾಗಿರುವ ಪರ್ವೇಜ್ ಪರ್ವಾಜ್ ಎಂಬವರೇ ದಂಡ ತೆತ್ತವರು. 2007 ಜನವರಿ 27 ರಂದು ನಡೆದ ಮೊಹರಂ ಮೆರವಣಿಗೆಯಲ್ಲಿ ಎರಡು ಪಂಗಡಗಳ ನಡುವೆ ಜಗಳ ಉಂಟಾಗಿ, ಓರ್ವ ಹಿಂದೂ ವ್ಯಕ್ತಿ ಮೃತಪಟ್ಟಿದ್ದರು. ಈ ಘಟನೆಗೆ ಅಂದಿನ ಗೋರಖಪುರ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಅವರು ಮಾಡಿದ ಭಾಷಣವೇ ಕಾರಣ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪರ್ವೇಜ್, 2008ರ ಸೆಪ್ಟೆಂಬರ್ 26 ರಂದು ದೂರು ಸಲ್ಲಿಸಿದ್ದರು.
ಆದರೆ ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರವು ನಿರಾಕರಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.