ಬೆಂಗಳೂರು: ‘ರಾಜ್ಯ ಬಿಜೆಪಿ ಸರ್ಕಾರ ವಸೂಲಿಗಿಳಿದಿದೆ. ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಆರು ತಿಂಗಳ ಹಿಂದಿನ ಎಲ್ಲ ಟೆಂಡರ್‌ಗಳನ್ನು ರದ್ದು ಮಾಡುತ್ತೇವೆ. ತನಿಖಾ ಆಯೋಗ ರಚಿಸಿ ಎಲ್ಲವನ್ನೂ ತನಿಖೆ ಮಾಡಿಸಿ, ಯಾರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ ಅವೆಲ್ಲವನ್ನೂ ಬಯಲಿಗೆಳೆಯುತ್ತೇವೆ’ ಎಂದು ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಶಾಸಕ ಪ್ರಿಯಾಂಕ ಖರ್ಗೆ ಜೊತೆ ಸುದ್ದಿಗೋಷ್ಠಿ ಯಲ್ಲಿ ಬುಧವಾರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಅಕ್ರಮದಲ್ಲಿ ಭಾಗಿಯಾದ ಅಧಿಕಾರಿ ಗಳು, ಗುತ್ತಿಗೆದಾರರು ಮತ್ತು ರಾಜಕಾರಣಿಗಳನ್ನು ಸುಮ್ಮನೆ ಬಿಡುವು ದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಜಲಸಂಪನ್ಮೂಲ, ಆರೋಗ್ಯ, ಲೋಕೋಪಯೋಗಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ತರಾತುರಿಯಲ್ಲಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ.
ನಿಮ್ಮ ಟೆಂಡರ್ ಹಗರಣಗಳಿಗೆ ಉತ್ತರ ಕೊಡಿ: ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ ಅವಧಿಯ ಹಗರಣಗಳ ಬಗ್ಗೆ ಲೋಕಾಯುಕ್ತದಿಂದ ತನಿಖೆ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕರು ತಮ್ಮ ಮೇಲಿರುವ ಭ್ರಷ್ಟಾಚಾರದ ಆರೋಪಗಳು ಮತ್ತು ಅವರ ಅವಧಿಯಲ್ಲಿ ಆಗಿರುವ ಟೆಂಡರ್ ಹಗರಣಗಳ ಬಗ್ಗೆ ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಕಾಂಗ್ರೆಸ್ಸಿಗರಿಗೆ ಹುಚ್ಚು ಹಿಡಿದಿದೆ: ಬಿಎಸ್‌ವೈ
‘ಕಾಂಗ್ರೆಸ್ ನಾಯಕರು ಹುಚ್ಚರು, ತಲೆ ತಿರುಕರು. ಬಾಯಿಗೆ ಬಂದಂತೆ ಕಪೋಲ ಕಲ್ಪಿತ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆ ವಿರೋಧ ಪಕ್ಷ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ನಾಯಕರ ಮಧ್ಯೆ ವಾಕ್ಸಮರವೂ ಬಿರುಸುಗೊಂಡಿದೆ. ‘ನೂರಾರು ಕೋಟಿ ಟೆಂಡರ್ ಪ್ರಕ್ರಿಯೆಗೆ ತರಾತುರಿಯಲ್ಲಿ ಕೈಹಾಕಿರುವ ಸರ್ಕಾರ, ಚುನಾವಣೆಗಾಗಿ ಗುತ್ತಿಗೆದಾರರ ಮೂಲಕ ವಸೂಲಿಗಿಳಿದಿದೆ’ ಎಂದು ‘ಕೈ’ ನಾಯಕರು ಆರೋಪಿಸಿದ್ದಾರೆ. ‘ಅವರ ಪಕ್ಷ ಅಧಿಕಾರದಲ್ಲಿದ್ದ ಅವಧಿಯ ಹಗರಣಗಳು ಮತ್ತು ಅಕ್ರಮ ಟೆಂಡರ್‌ಗಳಿಗೆ ಮೊದಲು ಉತ್ತರ ಕೊಡಲಿ’ ಎಂದು ‘ಕಮಲ’ ನಾಯಕರು ತಿರುಗೇಟು ಕೊಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.