ಬೆಂಗಳೂರು: ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿಯ ಎರಡನೇ ಆವೃತ್ತಿಯಲ್ಲಿ ಫೈನಲ್ ತಲುಪಲು ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಮುಂಬರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಸರಣಿ ಅತ್ಯಂತ ಮಹತ್ವದ್ದಾಗಿದೆ. ಭಾರತದ ಆತಿಥ್ಯದಲ್ಲಿ 2023ರ ಸಾಲಿನ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಸರಣಿ ನಡೆಯಲಿದ್ದು, 4 ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಫೆ.9ರಂದು ಶುರುವಾಗಲಿದೆ. ಈ ಸರಣಿಯ ಫಲಿತಾಂಶದ ಬಳಿಕ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದಲ್ಲಿ ಆಡುವ ತಂಡಗಳು ಯಾವುವು ಎಂಬುದು ಖಚಿತವಾಗಲಿದೆ.
1996-97ರಲ್ಲಿ ಮೊದಲ ಸರಣಿ
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು 1947ರಿಂದ 1992ರವರೆಗೆ ಆಡಿರುವ 12 ಟೆಸ್ಟ್ ಕ್ರಿಕೆಟ್ ಸರಣಿಗಳಲ್ಲಿ ಒಟ್ಟಾರೆ 50 ಪಂದ್ಯಗಳನ್ನು ಆಡಿವೆ. 1992ರಲ್ಲಿ ಈ ಟೆಸ್ಟ್ ಸರಣಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿ ಹೆಸರಿಡಲಾಯಿತು. ದಿಗ್ಗಜರಾದ ಆಲನ್ ಬಾರ್ಡರ್ ಮತ್ತು ಸುನೀಲ್ ಗವಾಸ್ಕರ್ ಹೆಸರನ್ನು ಈ ಟೆಸ್ಟ್ ಸರಣಿಗೆ ನಾಮಕರಣ ಮಾಡಲಾಗಿದ್ದು, 1996-97ರಲ್ಲಿ ಮೊದಲ ಆವೃತ್ತಿಯ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ನಡೆಯಿತು.
ಭಾರತದ ಹ್ಯಾಟ್ರಿಕ್ ಸಾಧನೆ
ಟೀಮ್ ಇಂಡಿಯಾ ಕಳೆದ ಮುರು ಆವೃತ್ತಿಗಳಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆದ್ದು ಹ್ಯಾಟ್ರಿಕ್ ಸಾಧನೆ ಮೆರೆದಿದೆ. 2020-21ರಲ್ಲಿ ಕೊನೇ ಬಾರಿ ಟೆಸ್ಟ್ ಸರಣಿ ನಡೆದಾಗ ಭಾರತ ತಂಡ ಆರಂಭಿಕ ಹಿನ್ನಡೆ ಬದಿಗೊತ್ತಿ 2-1 ಅಂತರದಲ್ಲಿ ಜಯ ದಾಖಲಿಸಿತ್ತು.
ಈ ಬಾರಿಯ ಸರಣಿಗೆ ಭಾರತ ತಂಡ ಹೀಗಿದೆರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್ ಭರತ್ (ವಿಕೆಟ್‌ಕೀಪರ್), ಇಶಾನ್ ಕಿಶನ್ (ವಿಕೆಟ್‌ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.
ಆಸ್ಟ್ರೇಲಿಯಾ ತಂಡದ ವಿವರ
ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕೇರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜಾಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಶೇನ್, ನೇಥನ್ ಲಯಾನ್, ಲ್ಯಾನ್ಸ್ ಮಾರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.