JRM
ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್ ಹೈಕಮಾಂಡ್‌ನ ದೂತರು ಈಗಾಗಲೇ ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಎರಡೂ ಪಕ್ಷಗಳ ಸ್ಥಳೀಯ ನಾಯಕರು ಜೆಡಿಎಸ್ ಕುರಿತು ಲಘುವಾಗಿ ಮಾತನಾಡುತ್ತಿದ್ದಾರೆ. ಜೆಡಿಎಸ್ ಪಕ್ಷವನ್ನು ಮಗಿಸಿಬಿಟ್ಟಿದ್ದೇವೆ ಎನ್ನುವವರೂ ಇದ್ದಾರೆ. ಕೆಲವರು 140–150 ಸ್ಥಾನ ಗೆಲ್ಲುವ ಮಾತನಾಡುತ್ತಿದ್ದಾರೆ. ಆದರೆ, ಜೆಡಿಎಸ್‌ನ ಬೆಳವಣಿಗೆಯಿಂದ ಎರಡೂ ಪಕ್ಷದ ವರಿಷ್ಠರು ಕಂಗೆಟ್ಟಿದ್ದಾರೆ. ಅವರ ದೂತರು ಚರ್ಚೆಗೆ ಬಂದಿದ್ದಾರೆ. ಸಹಜವಾಗಿ ಅವರೊಂದಿಗೆ ಚರ್ಚಿಸಿದ್ದೇನೆ’ ಎಂದು ಹೇಳಿದರು.
‘ಮೀಸಲಾತಿ ಹಂಚಿಕೆಯನ್ನು ಪರಿಷ್ಕರಿಸಲು ಬಿಜೆಪಿ ಸರ್ಕಾರ ಕೈಗೊಂಡಿರುವ ತೀರ್ಮಾನಕ್ಕೆ ನನ್ನ ಬೆಂಬಲವಿಲ್ಲ. ಸಂವಿಧಾನದ ಆಶಯದಂತೆ ಮೀಸಲಾತಿ ಹಂಚಿಕೆಗೆ ನಮ್ಮ ಬೆಂಬಲ. ಮೀಸಲಾತಿ ಹೆಸರಿನಲ್ಲಿ ಜಾತಿ– ಜಾತಿಗಳ ನಡುವೆ ವೈಷಮ್ಯ ಸೃಷ್ಟಿಸುವ ತೀರ್ಮಾನಕ್ಕೆ ಬೆಂಬಲ ನೀಡುವುದಿಲ್ಲ’ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಜೆಡಿಎಸ್, ಕಾಂಗ್ರೆಸ್ ನಮ್ಮ ಪ್ರತಿಸ್ಪರ್ಧಿ: ಸಚಿವ ಅಶ್ವತ್ಥನಾರಾಯಣ
ಬೆಂಗಳೂರು: ‘ಜೆಡಿಎಸ್ ಮತ್ತು ಕಾಂಗ್ರೆಸ್ ನಮ್ಮ ಪ್ರತಿಸ್ಪರ್ಧಿಗಳು. ಯಾರ ಜೊತೆಗೂ ನಾವು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
‘ಶ್ರೀರಂಗಪಟ್ಟಣಕ್ಕೆ ಬಹಳ ದೊಡ್ಡ ಇತಿಹಾಸವಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮುಂತಾದವರು ಇತಿಹಾಸಕ್ಕೆ ಅಪಚಾರ ಮಾಡುವ ಕೆಲಸ ಮಾಡಿದ್ದರು. ಒಕ್ಕಲಿಗ ಸಮುದಾಯಕ್ಕೆ ಕೆಟ್ಟ ಹೆಸರು ತರಲು ಮುಂದಾಗಿದ್ದರು. ಅವರ ಪ್ರಯತ್ನ ಸಫಲವಾಗಲಿಲ್ಲ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.