ಪಿಟಿಐ
ನವದೆಹಲಿ: ಮೋದಿ ಉಪನಾಮ ಕುರಿತಂತೆ ವ್ಯಂಗ್ಯ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬ್ರಿಟನ್ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಭಾರತದಿಂದ ಪರಾರಿಯಾಗಿರುವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಟ್ವೀಟ್ ಮಾಡಿದ್ದಾರೆ.
ಮೋದಿ ಉಪನಾಮ ವ್ಯಂಗ್ಯ ಮಾಡಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಕೆಲ ದಿನಗಳ ಬಳಿಕ ಲಲಿತ್ ಮೋದಿ ಈ ಹೇಳಿಕೆ ಕೊಟ್ಟಿದ್ದಾರೆ.
2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, 'ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ' ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ಮೂಲಕ ರಾಹುಲ್ ಅವರು 'ಮೋದಿ' ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಹೇಳಿಕೆಯಲ್ಲಿ ರಾಹುಲ್ ಗಾಂಧಿ ಲಲಿತ್ ಮೋದಿ ಹೆಸರನ್ನೂ ಪ್ರಸ್ತಾಪಿಸಿದ್ದರು.
ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಲಲಿತ್ ಮೋದಿ, ರಾಹುಲ್ ಗಾಂಧಿ ಮತ್ತು ಸಹಚರರು ಪದೇ ಪದೇ ನಾನು ದೇಶ ಬಿಟ್ಟು ಪರಾರಿಯಾಗಿರುವ ಕಾನೂನಿನ ಕೈಯಿಂದ ತಪ್ಪಿಸಿಕೊಂಡಿರುವವನೆಂದು ಹೇಳುತ್ತಿರುವುದು ಹೇಗೆ? ಏಕೆ? ನನ್ನ ವಿರುದ್ಧದ ಆರೋಪಗಳು ಸಾಬೀತಾಗಿವೆಯೇ. ವಿರೋಧ ಪಕ್ಷಗಳ ಎಲ್ಲ ನಾಯಕರಿಗೂ ತಪ್ಪು ಮಾಹಿತಿ ನೀಡಲಾಗಿದೆ ಎಂದು ನಾನು ಭಾವಿಸುತ್ತೇನೆ’ಎದು ಅವರು ಹೇಳಿದ್ದಾರೆ.
ರಾಹುಲ್ ಗಾಂಧಿಯವರನ್ನು ಬ್ರಿಟನ್ ನ್ಯಾಯಾಲಯಕ್ಕೆ ಎಳೆಯಲು ನಾನು ತಕ್ಷಣ ನಿರ್ಧರಿಸಿದ್ದೇನೆ. ರಾಹುಲ್ ಗಾಂಧಿ ಪಕ್ಕಾ ಪುರಾವೆಗಳೊಂದಿಗೆ ನ್ಯಾಯಾಲಯಕ್ಕೆ ಬರಬೇಕಾಗುತ್ತದೆ. ರಾಹುಲ್ ತನ್ನನ್ನು ತಾನು ಸಂಪೂರ್ಣ ಮೂರ್ಖನನ್ನಾಗಿಸಿಕೊಳ್ಳುವುದನ್ನು ಎದುರುನೋಡುತ್ತಿದ್ದೇನೆ ಎಂದಿದ್ದಾರೆ.
ಟ್ವೀಟ್‌ಗಳನ್ನು ಕಾಂಗ್ರೆಸ್‌ನ ಹಲವು ನಾಯಕರಿಗೆ ಟ್ಯಾಗ್ ಮಾಡಿರುವ ಅವರು, ಇವರೆಲ್ಲರೂ ವಿದೇಶಗಳಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಅವುಗಳ ವಿಳಾಸ ಮತ್ತು ಚಿತ್ರಗಳನ್ನು ನಾನು ಕಳುಹಿಸುತ್ತೇನೆ. ನಿಜವಾದ ಕಳ್ಳರು ದೇಶದ ಜನರನ್ನು ಮೂರ್ಖರನ್ನಾಗಿಸುವುದು ಬೇಡ. ಈ ವಂಚನೆಗಳನ್ನು ತಡೆಯಲು ನೀವು ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ ತಕ್ಷಣ ನಾನು ಹಿಂತಿರುಗುತ್ತೇನೆ’ ಎಂದು ಅವರು ಹೇಳಿದ್ದಾರೆ.
‘ಕಳೆದ 15 ವರ್ಷಗಳಿಂದ ನನ್ನ ಮೇಲಿನ ನಯಾಪೈಸೆ ಆರೋಪ ಸಾಬೀತಾಗಿಲ್ಲ. ನಾನು ಈ ಜಗತ್ತಿನಲ್ಲಿ ಅತ್ಯದ್ಬುತ ಪಂದ್ಯಾವಳಿಯನ್ನು ಆರಂಭಿಸಿದೆ ಎಂಬುದಷ್ಟೇ ಸಾಬೀತಾಗಿದೆ. ಇದೀಗ, ಅದು ಹತ್ತಿರತ್ತಿರ 100 ಬಿಲಿಯನ್ ಡಾಲರ್(ಐಪಿಎಲ್ ಉದ್ದೇಶಿಸಿ) ವ್ಯವಹಾರವಾಗಿದೆ. ಮೋದಿ ಹೆಸರಿನ ಕುಟುಂಬಗಳು 1950ರ ದಶಕದಲ್ಲಿ ಮಾಡಿರುವ ಕೆಲಸವನ್ನು ಯಾವೊಬ್ಬ ಕಾಂಗ್ರೆಸ್ ನಾಯಕನೂ ಮರೆಯಬಾರದು. ನು ಕೂಡ ಅವರು ಕನಸು ಕಾಣುವುದಕ್ಕಿಂತ ಹೆಚ್ಚಿನದನ್ನು ಮಾಡಿದ್ದೇನೆ’ ಎಂದು ಹೇಳಿದ್ದಾರೆ.
Highlights -
ಮೋದಿ ಉಪನಾಮ ವ್ಯಂಗ್ಯ ಮಾಡಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಕೆಲ ದಿನಗಳ ಬಳಿಕ ಲಲಿತ್ ಮೋದಿ ಈ ಹೇಳಿಕೆ ಕೊಟ್ಟಿದ್ದಾರೆ.
Cut-off box -
ಟ್ವೀಟ್‌ಗಳನ್ನು ಕಾಂಗ್ರೆಸ್‌ನ ಹಲವು ನಾಯಕರಿಗೆ ಟ್ಯಾಗ್ ಮಾಡಿರುವ ಅವರು ಇವರೆಲ್ಲರೂ ವಿದೇಶಗಳಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಅವುಗಳ ವಿಳಾಸ ಮತ್ತು ಚಿತ್ರಗಳನ್ನು ನಾನು ಕಳುಹಿಸುತ್ತೇನೆ. ನಿಜವಾದ ಕಳ್ಳರು ದೇಶದ ಜನರನ್ನು ಮೂರ್ಖರನ್ನಾಗಿಸುವುದು ಬೇಡ. ಈ ವಂಚನೆಗಳನ್ನು ತಡೆಯಲು ನೀವು ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ ತಕ್ಷಣ ನಾನು ಹಿಂತಿರುಗುತ್ತೇನೆ’ ಎಂದು ಅವರು ಹೇಳಿದ್ದಾರೆ.
Graphic text / Statistics - ಟ್ವೀಟ್‌ಗಳನ್ನು ಕಾಂಗ್ರೆಸ್‌ನ ಹಲವು ನಾಯಕರಿಗೆ ಟ್ಯಾಗ್ ಮಾಡಿರುವ ಅವರು ಇವರೆಲ್ಲರೂ ವಿದೇಶಗಳಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಅವುಗಳ ವಿಳಾಸ ಮತ್ತು ಚಿತ್ರಗಳನ್ನು ನಾನು ಕಳುಹಿಸುತ್ತೇನೆ. ನಿಜವಾದ ಕಳ್ಳರು ದೇಶದ ಜನರನ್ನು ಮೂರ್ಖರನ್ನಾಗಿಸುವುದು ಬೇಡ. ಈ ವಂಚನೆಗಳನ್ನು ತಡೆಯಲು ನೀವು ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ ತಕ್ಷಣ ನಾನು ಹಿಂತಿರುಗುತ್ತೇನೆ’ ಎಂದು ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.