ADVERTISEMENT

ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಿರಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2024, 12:49 IST
Last Updated 10 ಜನವರಿ 2024, 12:49 IST

ಪ್ರಜಾವಾಣಿ ವಾರ್ತೆ
ಸಿರುಗುಪ್ಪ: 'ಬಿಪಿಎಲ್ ಮತ್ತು ಎಪಿಎಲ್ ಫಲಾನುಭವಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಸಂಬಂಧಿತ ಹಲವಾರು ಯೋಜನೆಗಳ ಪ್ರಯೋಜನ ಪಡೆಯಬಹುದು' ಎಂದು ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಭೀಮರೆಡ್ಡಿ ತಿಳಿಸಿದರು.

ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬಿಇ ರಾಮಯ್ಯ ಪದವಿ ಕಾಲೇಜುಗಳಲ್ಲಿ ಬುಧವಾರ ನಡೆದ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಹಾಗೂ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ ತಿಳುವಳಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಸದಸ್ಯರಿಗೆ ₹5 ಲಕ್ಷ ಹಾಗೂ ಎಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಸದಸ್ಯರಿಗೆ ₹1.5 ಲಕ್ಷದ ವರೆಗಿನ ವಾರ್ಷಿಕ ಉಚಿತ ಚಿಕಿತ್ಸಾ ಸೌಲಭ್ಯ ಇದ್ದು. ಆಯ್ದ ಕೆಲವು ಉನ್ನತ ದರ್ಜೆಯ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಈ ಯೋಜನೆ ಅಡಿಯಲ್ಲಿ ಬರಲಿದ್ದು ಎಪಿಎಲ್, ಬಿಪಿಎಲ್ ಕುಟುಂಬಗಳು ಉಚಿತ ಚಿಕಿತ್ಸಾ ಸೌಲಭ್ಯದ ಲಾಭ ಪಡೆಯಿರಿ ಎಂದು ಹೇಳಿದರು.

ADVERTISEMENT

ಜಿಲ್ಲಾ 'ಈ -ಹಾಸ್ಪಿಟಲ್' ನ ವೀರಭದ್ರಪ್ಪ ವಿದ್ಯಾರ್ಥಿಗಳು ಮೊಬೈಲ್ ಮೂಲಕ ನೋಂದಣಿ ವಿಧಾನ ತಿಳಿಸಿಕೊಟ್ಟರು.

ಅಂಗಾಂಗ ದಾನದ ಮಹತ್ವ ಕುರಿತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ ಮಾಹಿತಿ ನೀಡಿದರು.

ಸರ್ಕಾರಿ ಕೈಗಾರಿಕೆ ಸಂಸ್ಥೆಯ ಪ್ರಾಂಶುಪಾಲ ಮೆಹಬೂಬ್ ಸಾಬ್, ಬಿ ಈ ರಾಮಯ್ಯ ಪದವಿ ಕಾಲೇಜಿನ ಪ್ರಾಂಶುಪಾಲ ಭೀಮಲಿಂಗಪ್ಪ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.