ಪ್ರಜಾವಾಣಿ ವಾರ್ತೆ
ದೇವನಹಳ್ಳಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು/ಶಾಲೆಗಳಿಗೆ ಭರಿಸಬೇಕಾದ ಎಲ್ಲ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚ ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.
ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 080-29787448, 080- 27681784, 080- 27623681, 080- 27723172, 080- 27931528 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.