ಪ್ರಜಾವಾಣಿ ವಾರ್ತೆ
ದೇವನಹಳ್ಳಿ: ತಾಲ್ಲೂಕು ಐಬಸಾಪುರದಲ್ಲಿ ಗಾಂಧಿ ಕೃಷಿ ವಿಶ್ವವಿದ್ಯಾಲಯ ಕೇಂದ್ರ ವಿದ್ಯಾರ್ಥಿಗಳ ಮೂರು ತಿಂಗಳ ಗ್ರಾಮೀಣ ಅನುಭವದ ಕೃಷಿ ವೈಸಿರಿ ಕಾರ್ಯಗಾರವನ್ನು ಮಂಗಳವಾರ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರು ಬೆಂಗಳೂರು ಗ್ರಾಮಾಂತರ, ಕೋಲಾರ ಬಯಲು ಸೀಮೆ ಪ್ರದೇಶಗಳಲ್ಲಿ ನೀರಿನ ಅಭಾವ ಇದ್ದರೂ ಉತ್ತಮವಾಗಿ ಬೆಳೆ ಬೆಳೆಯುತ್ತಾರೆ. ಹೀಗಾಗಿ ಅವರ ನೀರಿನ ಬವಣೆ ನೀಗಿಸಲು ಸರ್ಕಾರ ಕೆ.ಸಿ ಮತ್ತು ಎಚ್. ಎನ್ ವ್ಯಾಲಿ ಮೂಲಕ ಕರೆಗಳಿಗೆ ನೀರು ತುಂಬಿಸುತ್ತಿದೆ ಎಂದು ಹೇಳಿದರು.
ಮಾಜಿ ಸಂಸದ ವೀರಪ್ಪ ಮೊಯಿಲಿ, ಈ ಭಾಗದ ನೀರಿನ ಸಮಸ್ಯೆ ನಿವಾರಿಸಲು ಕಳೆದ ಬಾರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಕೆ.ಸಿ, ಎಚ್. ಎನ್ , ವೃಷಭಾವತಿ ವ್ಯಾಲಿ ಹಾಗೂ ಎತ್ತಿನಹೊಳೆ ಯೋಜನೆ ಮೂಲಕ ಇಲ್ಲಿನ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ ಎಂದರು.
ಜಿಕೆವಿಕೆ ಕುಲಪತಿ ಸುರೇಶ್ ಮಾತನಾಡಿ, ‘ನಮ್ಮ ವಿದ್ಯಾರ್ಥಿಗಳು ಮೂರು ತಿಂಗಳ ಕಾಲ ಗ್ರಾಮೀಣ ಅನುಭವದಲ್ಲಿ ಸುಮಾರು 20 ಕುಂಟೆ ಜಾಗದಲ್ಲಿ ಹಲವಾರು ಬೆಳೆ ಬೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರೈತರು ಇಸ್ರೇಲ್ ದೇಶದ ಪದ್ಧತಿಗಿಂತಲೂ ಈ ಜಿಲ್ಲೆಗಳಲ್ಲಿ ಉತ್ತಮವಾಗಿ ಬೆಳೆ ಬೆಳೆಯುವ ಪದ್ಧತಿ ಅಳವಡಿಸಿಕೊಂಡಿದ್ದಾರೆ ’ ಎಂದು ಶ್ಲಾಘಿಸಿದರು.
ಗ್ರಾ.ಪಂ ಅಧ್ಯಕ್ಷ ನಾಗಮಣಿ ಮಂಜುನಾಥ್ ಮಾತನಾಡಿದರು.
ಗ್ರಾ.ಪಂ ಮಾಜಿ ಅಧ್ಯಕ್ಷರಾದ ಆನಂದ್, ರಾಮೇಗೌಡ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಜಿ.ಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ, ಜಿ.ಪಂ ಮಾಜಿ ಸದಸ್ಯ ಕೆ.ಸಿ. ಮಂಜುನಾಥ್, ಜಿಲ್ಲಾ ಎಸ್‌ಸ್ಸಿ ಘಟಕದ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್, ಕೆಪಿಸಿಸಿ ಮಹಿಳಾ ಕಾರ್ಯದರ್ಶಿ ಅಕ್ಕಯಮ್ಮ, ಚನ್ನರಾಯಪಟ್ಟಣ ಗ್ರಾ.ಪಂ ಅಧ್ಯಕ್ಷ ಮಾರೇಗೌಡ, ಮಾಜಿ ಅಧ್ಯಕ್ಷ ಶಿವಕುಮಾರ್, ಜಿಕೆವಿಕೆ ಕಾಲೇಜು ಪ್ರಾಧ್ಯಾಪಕರಾದ ಸಿ ನಾರಾಯಣಸ್ವಾಮಿ, ಸವಿತಾ ಗಣೇಶ್, ನರಸಮ್ಮ, ಎಂಪಿಸಿಎಸ್ ಮಾಜಿ ಅಧ್ಯಕ್ಷ ಬಿ ರಾಜಣ್ಣ, ಕುರುಬರಹಳ್ಳಿ ರಂಗಣ್ಣ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.