ADVERTISEMENT

ಗುಣಮಟ್ಟದ ಶಿಕ್ಷಣ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 12:25 IST
Last Updated 21 ಜನವರಿ 2022, 12:25 IST
ಬೆಳಗಾವಿ ತಾಲ್ಲೂಕಿನ ಹೊಸವಂಟಮುರಿ ಗ್ರಾಮದ ಸರ್ಕಾರಿ ಶಾಲೆಯ ಕೊಠಡಿಗಳನ್ನು ಶಾಸಕ ಸತೀಶ ಜಾರಕಿಹೊಳಿ ಶುಕ್ರವಾರ ಉದ್ಘಾಟಿಸಿದರು
ಬೆಳಗಾವಿ ತಾಲ್ಲೂಕಿನ ಹೊಸವಂಟಮುರಿ ಗ್ರಾಮದ ಸರ್ಕಾರಿ ಶಾಲೆಯ ಕೊಠಡಿಗಳನ್ನು ಶಾಸಕ ಸತೀಶ ಜಾರಕಿಹೊಳಿ ಶುಕ್ರವಾರ ಉದ್ಘಾಟಿಸಿದರು   

ಬೆಳಗಾವಿ: ‘ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಆದ್ಯತೆ ಕೊಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸೂಚಿಸಿದರು.

ಯಮಕನಮರಡಿ ಮತ ಕ್ಷೇತ್ರದ ಹೊಸವಂಟಮುರಿ ಗ್ರಾಮದಲ್ಲಿ ₹ 1 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 4 ಕೊಠಡಿಗಳು, ₹ 16 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಅಂಗನವಾಡಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಸ್ತುತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅಗತ್ಯ. ಆದ್ದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಕ್ಷೇತ್ರದ ಎಲ್ಲ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲಾಗಿದೆ. ಇನ್ನೂ ಏನಾದರೂ ಸಮಸ್ಯೆಗಳಿದ್ದರೆ ಅವುಗಳನ್ನೂ ಪರಿಹರಿಸಲಾಗುವುದು’ ಎಂದು ಭರವಸೆ ನೀಡಿದರು.

ADVERTISEMENT

ಶಾಲೆಯ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.

ಮಾಜ ಕಲ್ಯಾಣ ಇಲಾಖೆ ವತಿಯಿಂದ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಅಂಬೇಡ್ಕರ್‌ ಭವನ ಉದ್ಘಾಟಿಸಿದರು. ಹೊಸ ವಂಟಮುರಿ ಗ್ರಾಮದಿಂದ ಇಸ್ಲಾಂಪುರದವರೆಗೆ ₹ 4 ಕೋಟಿ ಮೊತ್ತದಲ್ಲಿ ಕೈಗೊಂಡಿರುವ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಮುಖಂಡರಾದ ಈರಪ್ಪ ಪಾಟೀಲ , ಬಸು ಜಿದ್ದಿ, ರಾಮಣ್ಣ ಗುಳ್ಳಿ, ಹನುಮಂತ ಮುದಗನ್ಬವರ, ಮಾರುತಿ ಮಸ್ತಿ, ಸಿದ್ದಪ್ಪ ಹೊಳಿಕರ, ಸೂರಜ ಜಿಂಡ್ರಾಳಿ, ಲಗಮನಗೌಡ ಪಾಟೀಲ್, ಶಿವಪ್ಪ ಹುನ್ನೂರಿ, ಸುರೇಶ ನಾಯ್ಕ ಇದ್ದರು.

ಸಾರಾಂಶ

‘ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಆದ್ಯತೆ ಕೊಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.