ADVERTISEMENT

ರಾಮತೀರ್ಥನಗರ ಪಬ್ಲಿಕ್ ಶಾಲೆ ಮೇಲ್ದರ್ಜೆಗೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2022, 14:43 IST
Last Updated 19 ಜನವರಿ 2022, 14:43 IST
ಬೆಳಗಾವಿಯ ರಾಮತೀರ್ಥನಗರದ ಪಬ್ಲಿಕ್ ಶಾಲೆ
ಬೆಳಗಾವಿಯ ರಾಮತೀರ್ಥನಗರದ ಪಬ್ಲಿಕ್ ಶಾಲೆ   

ಬೆಳಗಾವಿ: ‘ಉತ್ತರ ಮತಕ್ಷೇತ್ರ ವ್ಯಾಪ್ತಿಯ ಶಾಲೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ದೊರೆತಿದೆ’ ಎಂದು ಬಿಜೆಪಿ ಶಾಸಕ ಅನಿಲ ಬೆನಕೆ ತಿಳಿಸಿದ್ದಾರೆ.

ಈ ಬಗ್ಗೆ ಬುಧವಾರ ಪ್ರಕಟಣೆ ನೀಡಿರುವ ಅವರು, ‘ನಗರದ ಸರ್ದಾರ್‌ ಪ್ರೌಢಶಾಲೆ ಹಾಗೂ ಕಣಬರ್ಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶತಮಾನ ಪೂರೈಸಿರುವ ಹಿನ್ನೆಲೆಯಲ್ಲಿ ಅಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಕ್ರಮವಾಗಿ ₹ 15 ಲಕ್ಷ ಮತ್ತು ₹ 16.50 ಲಕ್ಷ ಅನುದಾನ ಮಂಜೂರಾಗಿದೆ’ ಎಂದು ಹೇಳಿದ್ದಾರೆ.

‘ಈ ಬಗ್ಗೆ ಸತತ ಪ್ರಯತ್ನ ನಡೆಸಿದ್ದೆ. ಅದಕ್ಕೆ ಸರ್ಕಾರ ಸ್ಪಂದಿಸಿದೆ. ರಾಮತೀರ್ಥ ನಗರದ ಸರ್ಕಾರಿ ಪಬ್ಲಿಕ್ ಶಾಲೆಯನ್ನು ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಾಗಿ ಉನ್ನತೀಕರಿಸಲು ಕೂಡ ಮಂಜೂರಾತಿ ಸಿಕ್ಕಿದೆ. ಇದರಿಂದ ಆ ಭಾಗದ ಬಡ ಕುಟುಂಬದ ವಿದ್ಯಾರ್ಥಿಗಳ ಹೆಚ್ಚಿನ ವ್ಯಾಸಂಗಕ್ಕೆ ಅನುಕೂಲವಾಗಲಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ADVERTISEMENT

‘ಕ್ಷೇತ್ರದಲ್ಲಿ ಸ್ಮಾರ್ಟ ಸಿಟಿ ಯೋಜನೆಯಲ್ಲಿ ₹ 2 ಕೋಟಿ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ₹ 70 ಲಕ್ಷದಲ್ಲಿ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ. ಕ್ಷೇತ್ರದ ಇನ್ನುಳಿದ ಎಲ್ಲ  ಶಾಲೆಗಳನ್ನೂ ಅಭಿವೃದ್ಧಿಪಡಿಸಲು ಯತ್ನಿಸುತ್ತೇನೆ‘ ಎಂದು ಹೇಳಿದ್ದಾರೆ.

ಸಾರಾಂಶ

‘ಉತ್ತರ ಮತಕ್ಷೇತ್ರ ವ್ಯಾಪ್ತಿಯ ಶಾಲೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ದೊರೆತಿದೆ’ ಎಂದು ಬಿಜೆಪಿ ಶಾಸಕ ಅನಿಲ ಬೆನಕೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.