ADVERTISEMENT

ಜನೌಷಧಿ ಮಳಿಗೆಯಿಂದ ಅತ್ಯುತ್ತಮ ಸೇವೆ: ಕೇಂದ್ರ ಸಚಿವ ಮನ್‌ಸುಖ್‌ ಮಾಂಡವಿಯಾ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 20:13 IST
Last Updated 10 ಅಕ್ಟೋಬರ್ 2021, 20:13 IST
ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯಾ ಅವರು ಹಿರಿಯ ನಾಗರಿಕರಿಗೆ ಔಷಧ ಕಿಟ್‌ಗಳನ್ನು ವಿತರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ.ಸುಧಾಕರ್, ಸಂಸದ ತೇಜಸ್ವಿ ಸೂರ್ಯ ಇದ್ದಾರೆ.  -ಪ್ರಜಾವಾಣಿ ಚಿತ್ರ
ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯಾ ಅವರು ಹಿರಿಯ ನಾಗರಿಕರಿಗೆ ಔಷಧ ಕಿಟ್‌ಗಳನ್ನು ವಿತರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ.ಸುಧಾಕರ್, ಸಂಸದ ತೇಜಸ್ವಿ ಸೂರ್ಯ ಇದ್ದಾರೆ.  -ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಜನೌಷಧಿ ಮಳಿಗೆಗಳಲ್ಲಿನ ಔಷಧಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು, ಔಷಧ ನಿಯಂತ್ರಕರಿಂದ ಸೂಕ್ತ ತಪಾಸಣೆಗೆ ಒಳಪಡುತ್ತಿವೆ. ಇದರಿಂದಾಗಿ ಕೇಂದ್ರ ಸರ್ಕಾರ ಆರೋಗ್ಯ ವಲಯದಲ್ಲಿ ಅತ್ಯುತ್ತಮ ಸೇವೆ ಒದಗಿಸುತ್ತಿದೆ’ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್‌ಸುಖ್‌ ಮಾಂಡವಿಯಾ ತಿಳಿಸಿದರು.

ಭಾರತೀಯ ಔಷಧ ಮತ್ತು ವೈದ್ಯಕೀಯ ಸಾಧನಗಳ ಬ್ಯೂರೋ (ಪಿಎಂಬಿಐ) ವತಿಯಿಂದ ಬಸವನಗುಡಿಯಲ್ಲಿ ಭಾನುವಾರ ಆಯೋಜಿಸಿದ್ದ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜನೌಷಧಿ ಮಳಿಗೆ ಕಾರ್ಯಕ್ರಮದಡಿ ಜನರಿಗೆ ಅಗತ್ಯ ಔಷಧಿಗಳು ಸೂಕ್ತ ರೀತಿಯಲ್ಲಿ ತಲುಪುತ್ತಿದೆ. ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ ತಿಂಗಳಿಗೆ ಕನಿಷ್ಠ ₹4 ಸಾವಿರ ಬೆಲೆಯ ಔಷಧ ಅಗತ್ಯ. ಆದರೆ, ಜನೌಷಧಿ ಮಳಿಗೆಗಳಲ್ಲಿ ಕಡಿಮೆ ಬೆಲೆಗೆ ಔಷಧಗಳು ಲಭ್ಯವಾಗುತ್ತಿವೆ. ದೇಶದಲ್ಲಿ ಪ್ರಸ್ತುತ ಎಂಟು ಸಾವಿರಕ್ಕೂ ಹೆಚ್ಚು ಮಳಿಗೆಗಳು ಕಾರ್ಯನಿರ್ವಹಿಸುತ್ತಿವೆ’ ಎಂದರು.

ADVERTISEMENT

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,‘ ಪ್ರಧಾನಿ ನರೇಂದ್ರ ಮೋದಿ ಅವರು, ಕೇವಲ ಯೋಜನೆಗಳನ್ನು ಘೋಷಿಸುವುದಿಲ್ಲ. ಅದನ್ನು ಸೂಕ್ತ ರೀತಿಯಲ್ಲಿ ಜನರಿಗೆ ತಲುಪಿಸುವಂತೆ ಸೂಕ್ತ ಕಾರ್ಯ ಹಾಗೂ ಪ್ರಚಾರಕ್ಕೂ ಆದ್ಯತೆ ನೀಡುತ್ತಿದ್ದಾರೆ’ ಎಂದು ಶ್ಲಾಘಿಸಿದರು.

ಶಾಸಕ ಎಲ್‌.ಎ.ರವಿ ಸುಬ್ರಹ್ಮಣ್ಯ, ಅದಮ್ಯ ಚೇತನ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ತೇಜಸ್ವಿನಿ ಅನಂತಕುಮಾರ್, ಪಿಎಂಬಿಐನ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾರ್ಥ್ ಗೌತಮ್ ಶರ್ಮ ಹಾಗೂ ಇತರರು ಭಾಗವಹಿಸಿದ್ದರು.

ಸಾರಾಂಶ

‘ಜನೌಷಧಿ ಮಳಿಗೆಗಳಲ್ಲಿನ ಔಷಧಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು, ಔಷಧ ನಿಯಂತ್ರಕರಿಂದ ಸೂಕ್ತ ತಪಾಸಣೆಗೆ ಒಳಪಡುತ್ತಿವೆ. ಇದರಿಂದಾಗಿ ಕೇಂದ್ರ ಸರ್ಕಾರ ಆರೋಗ್ಯ ವಲಯದಲ್ಲಿ ಅತ್ಯುತ್ತಮ ಸೇವೆ ಒದಗಿಸುತ್ತಿದೆ’ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್‌ಸುಖ್‌ ಮಾಂಡವಿಯಾ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.