ಬೆಂಗಳೂರು: ನಗರದಲ್ಲಿನ ರಸ್ತೆ ಗುಂಡಿಗಳಿಗೆ ಗುರುವಾರ ವಿಶೇಷ ಪೂಜೆ ಸಲ್ಲಿಸುವ ಮೂಲಕ, ಗಂಭೀರ ಸಮಸ್ಯೆಯನ್ನು ಸರ್ಕಾರ ಕಡೆಗಣಿಸಿರುವ ಬಗ್ಗೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿ–ಪ್ಯಾಕ್) ಕಾರ್ಯಕರ್ತರು ಆಯುಧ ಪೂಜೆಯ ದಿನದಂದು ಚಾಲುಕ್ಯ ವೃತ್ತದಲ್ಲಿನ ಗುಂಡಿಗಳಿಗೆ ಪೂಜೆ ಸಲ್ಲಿಸಿದರು.
‘ಜೀವಕ್ಕೆ ಹಾನಿ ಮಾಡುತ್ತಿರುವ ರಸ್ತೆ ಗುಂಡಿಗಳ ಸಮಸ್ಯೆ ಬಗ್ಗೆ ಸರ್ಕಾರ ಗಮನಹರಿಸಬೇಕಾಗಿದೆ. ಮಳೆ ನೀರು ಗುಂಡಿಗಳಲ್ಲಿ ನಿಲ್ಲುವುದರಿಂದ ವಾಹನ ಸವಾರರು ಗಮನಹರಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಗುಂಡಿಗಳು, ಜೀವಕ್ಕೆ ಅಪಾಯ ತಂದೊಡ್ಡಿವೆ. ಈಗಾಗಲೇ ಹಲವು ಅನಾಹುತಗಳು ನಗರದಲ್ಲಿ ಸಂಭವಿಸಿವೆ’ ಎಂದು ಹೋರಾಟಗಾರ್ತಿ ಕವಿತಾ ರೆಡ್ಡಿ ಆತಂಕ ವ್ಯಕ್ತಪಡಿಸಿದರು.
‘ಬಿಬಿಎಂಪಿಗೆ ಮನವಿಗಳನ್ನು ಸಲ್ಲಿಸಿ ಸಾಕಾಗಿದೆ. ಯಾವುದೇ ಕ್ರಮಗಳನ್ನು ಬಿಬಿಎಂಪಿ ಕೈಗೊಳ್ಳದಿರುವುದರಿಂದ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿದ್ದೇವೆ’ ಎಂದು ಅವರು ಹೇಳಿದರು.
‘ಸಮಸ್ಯೆಯ ಗಂಭೀರತೆಯನ್ನು ವ್ಯಂಗ್ಯವಾಗಿ ಎತ್ತಿ ತೋರಿಸಲು ಪೂಜೆ ಮಾಡಲಾಗಿದೆ. ಆಯುಧ ಪೂಜೆ ದಿನ ಸಾಂಪ್ರದಾಯಿಕವಾಗಿ ಯಂತ್ರಗಳನ್ನು ಪೂಜಿಸುವುದು ಸಾಮಾನ್ಯ. ಆದರೆ, ಈ ಬಾರಿ, ರಸ್ತೆ ಗುಂಡಿಗಳ ಅಮ್ಮನನ್ನು ಪೂಜಿಸಿದ್ದೇವೆ. ನಾಗರಿಕರ ಯಾವುದೇ ಜೀವವನ್ನು ತೆಗೆದುಕೊಳ್ಳಬೇಡ ಎಂದು ದೇವಿಯಲ್ಲಿ ಪ್ರಾರ್ಥಿಸಿದ್ದೇವೆ’ ಎಂದು ಹೇಳಿದರು.
ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿಗಳಿಗೆ ಗುರುವಾರ ವಿಶೇಷ ಪೂಜೆ ಸಲ್ಲಿಸುವ ಮೂಲಕ, ಗಂಭೀರ ಸಮಸ್ಯೆಯನ್ನು ಸರ್ಕಾರ ಕಡೆಗಣಿಸಿರುವ ಬಗ್ಗೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.