ಬೆಂಗಳೂರು: ಒಂದು ವಾರದಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರದ ಬೊಮ್ಮನಹಳ್ಳಿ ವಲಯದ ಎಚ್‌ಎಸ್‌ಆರ್ ಬಡಾವಣೆಯಲ್ಲಿ ಪ್ರವಾಹ ಉಂಟಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದಿಢೀರ್ ಭೇಟಿ ನೀಡಿದರು.
ಎಚ್‌ಎಸ್‌ಆರ್ ಬಡಾವಣೆಯ ಅಗರ ಕೆರೆ ಆಸುಪಾಸಿನಲ್ಲಿ ಮನೆಗಳಿಗೆ ನೀರು ನುಗ್ಗಿರುವ ತಗ್ಗುಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ನಗರದಲ್ಲಿ ಕೆಲವು ಕಡೆ ಪ್ರವಾಹ ಬಂದು ಜನವಸತಿಗಳಿಗೆಲ್ಲ ಸಾಕಷ್ಟು ತೊಂದರೆ ಆಗಿದೆ. ಅತಿ ಹೆಚ್ಚು ಮಳೆಯಾದ ಕೆಲವು ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಈ ತರಹ ಎಲ್ಲೆಲ್ಲಿ ಸಮಸ್ಯೆ ಉಂಟಾಗಿದೆ ಎಂಬುದನ್ನು ಪರಿಶೀಲಿಸುತ್ತೇನೆ. ಇಂದು ಕೆಲವು ಪ್ರದೇಶಗಳಿಗೆ ಮಾತ್ರ ಭೇಟಿ ನೀಡುತ್ತೇನೆ. ಇನ್ನುಳಿದ ಪ್ರದೇಶಗಳಿಗೆ ಮುಂದೆ ಭೇಟಿ ಕೊಡುತ್ತೇನೆ. ಪ್ರವಾಹ ತಪ್ಪಿಸಲು ಸೂಕ್ತ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತೇನೆ. ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ ಕೊಡುತ್ತೇನೆ’ ಎಂದರು.
ಪದೇ ಪದೇ ಗಡುವು ನೀಡಿದರೂ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚದಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಈ ಬಗ್ಗೆಯೂ ಬಿಬಿಎಂಪಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುತ್ತೇನೆ’ ಎಂದರು.
ಒಂದು ವಾರದಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರದ ಬೊಮ್ಮನಹಳ್ಳಿ ವಲಯದ ಎಚ್‌ಎಸ್‌ಆರ್ ಬಡಾವಣೆಯಲ್ಲಿ ಪ್ರವಾಹ ಉಂಟಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದಿಢೀರ್ ಭೇಟಿ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.