ಬೆಂಗಳೂರು: ದುಪ್ಪಟ್ಟು ಲಾಭದ ಆಮಿಷವೊಡ್ಡಿ ₹ 24.45 ಲಕ್ಷ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಕುರಿತು ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಮಹಾಲಕ್ಷ್ಮಿಪುರ ನಿವಾಸಿಯಾಗಿರುವ 27 ವರ್ಷದ ಯುವಕ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶದ ಸಮೇತ ಲಿಂಕ್ ಬಂದಿತ್ತು. ‘ಈ ಲಿಂಕ್ ಕ್ಲಿಕ್ ಮಾಡಿ ₹ 100 ಹೂಡಿಕೆ ಮಾಡಿದರೆ, ₹ 150 ಲಾಭ ಬರುತ್ತದೆ’ ಎಂಬುದಾಗಿ ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶ ನಂಬಿದ್ದ ದೂರುದಾರ, ಹಂತ ಹಂತವಾಗಿ ₹ 21.45 ಲಕ್ಷ ಹೂಡಿಕೆ ಮಾಡಿದ್ದರು.’
‘ನಿಗದಿತ ದಿನದೊಳಗೆ ಲಾಭದ ಹಣ ಹಾಗೂ ಅಸಲು ವಾಪಸು ಬಂದಿರಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ಪ್ರತಿಕ್ರಿಯೆ ಸಿಕ್ಕಿರ
ಲಿಲ್ಲ. ನೊಂದ ಯುವಕ, ಠಾಣೆಗೆ ದೂರು ನೀಡಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.
ದುಪ್ಪಟ್ಟು ಲಾಭದ ಆಮಿಷವೊಡ್ಡಿ ₹ 24.45 ಲಕ್ಷ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಕುರಿತು ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.