ಬೆಂಗಳೂರು: ‘ವೈವಾಹಿಕ ಜಾಲತಾಣವೊಂದರಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ₹ 60,300 ಪಡೆದು ವಂಚಿಸಿದ್ದಾನೆ’ ಎಂದು ಆರೋಪಿಸಿ ಯುವತಿಯೊಬ್ಬರು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
‘ಬಿಟಿಎಂ ಎರಡನೇ ಹಂತದ ಬಡಾವಣೆ ನಿವಾಸಿಯಾಗಿರುವ 29 ವರ್ಷದ ಯುವತಿ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ರಾಜು ವಿಠ್ಠಲ್ ಪಡುಕೋಟೆ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ವರನನ್ನು ಹುಡುಕುತ್ತಿದ್ದ ಯುವತಿ, ವೈವಾಹಿಕ ಜಾಲತಾಣವೊಂದರಲ್ಲಿ ವೈಯಕ್ತಿಕ ವಿವರವನ್ನು ನಮೂದಿಸಿ ಖಾತೆ ತೆರೆದಿದ್ದರು. ಅಲ್ಲಿಯೇ ಯುವತಿಗೆ ಆರೋಪಿ ಪರಿಚಯವಾಗಿತ್ತು. ತಾನು ಹೆಸ್ಕಾಂನಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದ ಆರೋಪಿ, ಮದುವೆಯಾಗುವ ಭರವಸೆ ನೀಡಿದ್ದ.’
‘ಯುವತಿಗೆ ಸರ್ಕಾರಿ ಕೆಲಸ ಕೊಡಿಸುವ ಆಮಿಷವೊಡ್ಡಿದ್ದ ಆರೋಪಿ, ಅದಕ್ಕೆಂದು ₹ 60,300 ಪಡೆದಿದ್ದ. ಅದಾದ ನಂತರ ಆರೋಪಿ ನಾಪತ್ತೆಯಾಗಿದ್ದಾನೆ. ಯಾವುದೇ ಕೆಲಸವನ್ನೂ ಕೊಡಿಸಿಲ್ಲ. ಹಣವನ್ನು ಮರಳಿಸಿಲ್ಲ’ ಎಂದೂ ಮೂಲಗಳು ತಿಳಿಸಿವೆ.
‘ವೈವಾಹಿಕ ಜಾಲತಾಣವೊಂದರಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ₹ 60,300 ಪಡೆದು ವಂಚಿಸಿದ್ದಾನೆ’ ಎಂದು ಆರೋಪಿಸಿ ಯುವತಿಯೊಬ್ಬರು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.