ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಅಲ್ಪಸಂಖ್ಯಾತರ ಮತಗಳಿಗಾಗಿ ಹಲ್ಲು ಗಿಂಜುತ್ತಿದ್ದಾರೆ. ಅದೇ ಉದ್ದೇಶದಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭಾನುವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.
‘ಅಲ್ಪಸಂಖ್ಯಾತರ ಮತ ಪಡೆಯಲು ಮಾಜಿ ಮುಖ್ಯಮಂತ್ರಿಗಳಿಬ್ಬರೂ ಸ್ಪರ್ಧೆಗಿಳಿದಿದ್ದಾರೆ. ಅವರಿಬ್ಬರ ಉದ್ದೇಶ ಎಲ್ಲರಿಗೂ ಗೊತ್ತಿದೆ. ಆರ್‌ಎಸ್‌ಎಸ್ ಜಗತ್ತಿನ ಅತಿದೊಡ್ಡ ಸ್ವಯಂಸೇವಾ ಸಂಘಟನೆ. ಇದು ಅವರಿಗೂ ಗೊತ್ತು. ಆದರೆ, ಮತಕ್ಕಾಗಿ ಟೀಕಿಸುತ್ತಿದ್ದಾರೆ’ ಎಂದು ಆರಗ ಜ್ಞಾನೇಂದ್ರ ಅವರು ಹೇಳಿದರು.
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಅಲ್ಪಸಂಖ್ಯಾತರ ಮತಗಳಿಗಾಗಿ ಹಲ್ಲು ಗಿಂಜುತ್ತಿದ್ದಾರೆ. ಅದೇ ಉದ್ದೇಶದಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.