ಚಾಮರಾಜನಗರ: ಸಮೀಪದ ಯಡಬೆಟ್ಟದಲ್ಲಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿರುವ ವೈದ್ಯರ ವಸತಿಗೃಹ ಕಟ್ಟಡಕ್ಕೆ ಬುಧವಾರ ರಾತ್ರಿ ಚಿರತೆಯೊಂದು ನುಗ್ಗಿದೆ. ರಾತ್ರಿ 9.30 ಸುಮಾರಿಗೆ ಕಟ್ಟಡದ ಮೊದಲ ಮಹಡಿಯಲ್ಲಿ ಚಿರತೆ ಓಡಾಡಿದೆ. ಚಿರತೆಯನ್ನು ಕಂಡವರು ಭಯಗೊಂಡರು. ಚಿರತೆಯು ಯಾರಿಗೂ ತೊಂದರೆ ಕೊಟ್ಟಿಲ್ಲ. ಸಂಸ್ಥೆಯು ಬೆಟ್ಟ ಗುಡ್ಡ ಪ್ರದೇಶದಲ್ಲಿದ್ದು, ಚಿರತೆ ಸಾಮಾನ್ಯವಾಗಿ ಓಡಾಡುತ್ತಿರುತ್ತವೆ.'ಈ ಪ್ರದೇಶದಲ್ಲಿ ಚಿರತೆಗಳಿವೆ, ಕ್ಯಾಂಪ್‌ನಲ್ಲಿ ಓಡಾಡುತ್ತಿದ್ದವು. ಆದರೆ, ಕಟ್ಟಡದ ಮೊದಲ ಮಹಡಿಗೆ ಹೇಗೆ ಬಂತು ಎಂಬುದು ಅಚ್ಚರಿ ತಂದಿದೆ' ಎಂದು ಸಂಸ್ಥೆಯ ಡೀನ್ ಡಾ.ಸಂಜೀವ್ ಅವರು 'ಪ್ರಜಾವಾಣಿ'ಗೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.