ADVERTISEMENT

ಚಾಮರಾಜನಗರ: 375 ಕೋವಿಡ್ ಪ್ರಕರಣಗಳು ದೃಢ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 16:24 IST
Last Updated 21 ಜನವರಿ 2022, 16:24 IST
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ   

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 375 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 170 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ. 

ಶುಕ್ರವಾರ 3,280 ಮಂದಿಯ ಪರೀಕ್ಷಾ ವರದಿ ಬಂದಿದ್ದು, 594 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಆದರೆ, 375 ಮಂದಿಯ ವಿವರಗಳು ಮಾತ್ರ ಲಭ್ಯವಾಗಿರುವುದರಿಂದ ಆ ಪ್ರಕರಣಗಳನ್ನು ಮಾತ್ರ ಜಿಲ್ಲಾಡಳಿತ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. 

ಸಕ್ರಿಯ ಪ್ರಕರಣಗಳ ಸಂಖ್ಯೆ 1,593ಕ್ಕೆ ಏರಿದೆ. ಸೋಂಕಿತರ ಪೈಕಿ 1,067 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಶುಕ್ರವಾರ ಸೋಂಕು ದೃಢಪಟ್ಟವರಲ್ಲಿ 250 ಮಂದಿಯನ್ನು ಹೋಂ ಐಸೊಲೇಷನ್‌ಗೆ ಕಳುಹಿಸಲಾಗಿದೆ. 

ADVERTISEMENT

ಜಿಲ್ಲೆಯಲ್ಲಿ ದೃಢ‍ಪ‍ಟ್ಟ ಪ್ರಕರಣಗಳ ಸಂಖ್ಯೆ 34,891ಕ್ಕೆ ಏರಿದೆ. 32,756 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ಹಾಗೂ ಕೋವಿಡ್‌ಯೇತರ ಕಾರಣಗಳಿಂದ 283 ಮಂದಿ ಮೃತಪಟ್ಟಿದ್ದಾರೆ. 

ಸಾರಾಂಶ

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 375 ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 170 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.