ಪ್ರಜಾವಾಣಿ ವಾರ್ತೆ
ಶಿಡ್ಲಘಟ್ಟ: ‘ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರನ್ನು ಜಗಜ್ಯೋತಿ ಬಸವಣ್ಣ ಎಂದು ಕರೆಯುತ್ತಿದ್ದರು. ಇದೀಗ ನರೇಂದ್ರ ಮೋದಿ ಅವರನ್ನು ವಿಶ್ವಗುರು ಎಂದು ಕರೆಯಲಾಗುತ್ತಿದೆ. ಮೋದಿ ಅವರ ಪ್ರಭಾವ ಅಷ್ಟರ ಮಟ್ಟಿಗೆ ಇದೆ’ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ನಗರದ ಬಿಜೆಪಿ ಸೇವಾಸೌಧ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸುತ್ತಿರುವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಮೈತ್ರಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ಈ ರಾಜ್ಯದ ಸಿ.ಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೆ ಕಾರಣ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ಅಧಿಕಾರದ ಅಹಂ ಬಿಟ್ಟು ಈ ನಾಡಿನ ಜನರ ಶ್ರೇಯಸ್ಸು ಅಭಿವೃದ್ಧಿಗಾಗಿ ಕೆಲಸ ಮಾಡುವಂತಾಗಬೇಕು ಎಂದರು.
ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಈ ದೇಶದ ಅನೇಕ ಶಕ್ತಿಗಳು ಒಟ್ಟುಗೂಡಿ ಕುತಂತ್ರ ನಡೆಸಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಇನ್ನಿಲ್ಲದ ಪ್ರಯತ್ನ ಪಟ್ಟರು. ಆದರೆ ಈ ದೇಶದ ಮತದಾರರು ಜಾತಿ ಧರ್ಮ ಭಾಷೆಯನ್ನು ಮೀರಿ ಗೆಲ್ಲಿಸಿದ್ದಾರೆ ಎಂದರು.
ಎಲ್ಲರಿಗೂ ಸಿಹಿ ಹಂಚಲಾಯಿತು. ಕೇಸರಿ ಶಲ್ಯಗಳನ್ನು ವಿತರಿಸಲಾಯಿತು. ಮಾಜಿ ಶಾಸಕ ಎಂ.ರಾಜಣ್ಣ, ಸೀಕಲ್ ಆನಂದಗೌಡ, ಬಂಕ್ ಮುನಿಯಪ್ಪ, ತಾದೂರು ರಘು, ಸುರೇಂದ್ರಗೌಡ, ಆಂಜನೇಯಗೌಡ, ಹುಜಗೂರು ರಾಮಣ್ಣ, ನಾರಾಯಣಸ್ವಾಮಿ, ರಾಘವೇಂದ್ರ, ನರೇಶ್, ರಜನೀಕಾಂತ್ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.