ಗುಡಿಬಂಡೆ: ಪಡಿತರ ನೀಡುವ ವಿಚಾರದಲ್ಲಿ ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ತಾಲ್ಲೂಕಿನ ಕಾಟೇನಹಳ್ಳಿಯಲ್ಲಿ ಪದ್ಮಾವತಮ್ಮ ಎಂಬುವವರು ನಡೆಸುತ್ತಿದ್ದ ಪಡಿತರ ವಿತರಣೆ ಅಂಗಡಿಯ ಪರವಾನಗಿಯನ್ನು ಭಾನುವಾರ ರದ್ದುಗೊಳಿಸಲಾಗಿದೆ.
ಪರಿಶಿಷ್ಟ ಸಮುದಾಯದ ನಾರಾಯಣಮ್ಮ ಅವರು ಪಡಿತರವನ್ನು ಪಡೆಯಲು ಹೋಗಿದ್ದರು. ಈ ವೇಳೆ ಪದ್ಮಾವತಮ್ಮ, ನಾರಾಯಣಮ್ಮ ಅವರನ್ನು ಜಾತಿನಿಂದನೆ ಮಾಡಿ, ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ನಾರಾಯಣಮ್ಮ ಅವರ ಪುತ್ರ ಆಕ್ರೋಶ ವ್ಯಕ್ತಪಡಿಸಿ ವಿಡಿಯೊ ಸಹ ಮಾಡಿದ್ದರು. ಆ ವಿಡಿಯೊ ವೈರಲ್ ಆಗಿತ್ತು. ಈ ವಿಚಾರ ಜಿಲ್ಲಾಡಳಿತದ ಗಮನಕ್ಕೆ ಬಂದಿತ್ತು.
ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದರು. ಸಚಿವರು ನಾರಾಯಣಮ್ಮ ಅವರಿಂದ ಮಾಹಿತಿ ಪಡೆದರು.
ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ‘ಹಲ್ಲೆ ನಡೆಸಿದ ಪದ್ಮಾವತಮ್ಮನ ಮೇಲೆ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆಕೆ ತಲೆಮರೆಸಿಕೊಂಡಿದ್ದಾರೆ. ಪದ್ಮಾವತಮ್ಮ ತಾಯಿ ನಾಗರತ್ನಮ್ಮ ಅವರ ಹೆಸರಿನಲ್ಲಿ ಪಡಿತರ ವಿತರಣೆಯ ಅಂಗಡಿ ಇದ್ದು ಆ ಪರವಾನಗಿಯನ್ನು ರದ್ದುಗೊಳಿಸಲಾಗಿದೆ’ ಎಂದು ಹೇಳಿದರು.
ಇಂತಹ ಘಟನೆಗಳು ಮರುಕಳಿಸದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ₹ 50 ಸಾವಿರ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ವಾರ್ತೆ ಗುಡಿಬಂಡೆ : ಬಡವರು ಬಲಹೀನರ ಮೇಲೆ ದೌರ್ಜನ್ಯ ನಡೆದಿರುವುದು ನನಗೆ ಅಪಮಾನವಾಗಿದ್ದು ಸರ್ಕಾರ ಬಲಹೀನರ ಪರವಾಗಿದೆ ಈಗಾಗಲೇ ದೌರ್ಜನ್ಯ ಮಾಡಿದ ಮಹಿಳೆಯ ಮೇಲೆ ಕಾನೂನು ಕ್ರಮದ ಜತೆಗೆ ಪಡಿತರ ಪರವಾನಿಗೆ ರದ್ದು ಮಾಡಲಾಗಿದ್ದು ಮತ್ತೋಮ್ಮ ಇಂತಹ ಘಟನೆ ನಡೆಯದಂತೆ ಅಧಿಕಾರಿಗಳು ಎಚ್ಚರ ವಹಿಸ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.