ಚಿಕ್ಕಬಳ್ಳಾಪುರ: 12ನೇ ಶತಮಾನದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನಕಾರರಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಪ್ರಮುಖರು. ಅವರು ವಚನಗಳ ಮೂಲಕ ನೀಡಿದ ವಿಚಾರಗಳು ಸಾರ್ವಕಾಲಿಕವಾಗಿವೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಹೆಚ್ಚು ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದರು.
ಜಿಲ್ಲೆಯ ಭೋವಿ ಸಮಾಜದವರು ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ವಿವಿಧ ಯೋಜನೆಗಳಡಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲ ಸಮುದಾಯದ ಕಟ್ಟಕಡೆಯ ವ್ಯಕ್ತಿಯ ಹಿತಕಾಯುವ ಹಾಗೂ ಅಭಿವೃದ್ಧಿ ಹೊಂದಲು ಸರ್ಕಾರ ಜಾರಿಗೆ ತಂದಿರುವ ಎಲ್ಲ ಯೋಜನೆಗಳನ್ನು ಸಕಾಲಕ್ಕೆ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಶಿವಯೋಗಿ ಸಿದ್ಧರಾಮೇಶ್ವರ ಅವರು ವಚನಗಳ ಮೂಲಕ ಸಮಾಜದ ಸಾಮಾಜಿಕ ಪಿಡುಗು ಹಾಗೂ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಆದರ್ಶರಾಗಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಪ್ರತಿಯೊಬ್ಬರು ಸಹ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎನ್. ಕೃಷ್ಣಪ್ಪ ಮಾತನಾಡಿ, ಭೋವಿ ಸಮಾಜದವರು ಇಂದಿಗೂ ಕಲ್ಲು, ಬಂಡೆಯನ್ನು ಹೊಡೆಯುವ ಕಸುಬನ್ನು ನಂಬಿ ಜೀವನ ಕಟ್ಟಿಕೊಂಡಿದ್ದಾರೆ. ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಯು ಸಹ ಅಭಿವೃದ್ಧಿಗೊಳ್ಳಲು ಸರ್ಕಾರ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು
ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶ್ರೀನಿವಾಸ್ ಮಾತನಾಡಿ, ಸಿದ್ಧರಾಮೇಶ್ವರ ಅವರ ವಚನಗಳು ಮತ್ತು ಆಲೋಚನೆಗಳು ಮಾನವಕುಲಕ್ಕೆ ಮಾರ್ಗದರ್ಶಕವಾಗಿವೆ ಎಂದು ಹೇಳಿದರು.
ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಎಂ. ಗುರ್ರಪ್ಪ, ಮುಖಂಡರಾದ ನಾರಾಯಣಸ್ವಾಮಿ, ವಿಜಯಕುಮಾರ್, ಆರ್. ವೆಂಕಟೇಶ್, ಮೂರ್ತಿ, ವೆಂಕಟರಮಣಪ್ಪ, ಶ್ರೀರಾಮಪ್ಪ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.
12ನೇ ಶತಮಾನದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನಕಾರರಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಪ್ರಮುಖರು. ಅವರು ವಚನಗಳ ಮೂಲಕ ನೀಡಿದ ವಿಚಾರಗಳು ಸಾರ್ವಕಾಲಿಕವಾಗಿವೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.