ADVERTISEMENT

ನಾಲ್ವರು ಪೊಲೀಸರು ಅಮಾನತು

ಠಾಣೆಯಿಂದ ಆರೋಪಿ ಪರಾರಿ ಪ್ರಕರಣ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 13:57 IST
Last Updated 12 ಅಕ್ಟೋಬರ್ 2021, 13:57 IST

ಚಿಕ್ಕಮಗಳೂರು: ‘ಪೊಕ್ಸೊ’ (ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ಠಾಣೆಯಿಂದ ಪರಾರಿಯಾಗಿದ್ದಕ್ಕೆ ಸಂಬಂಧಿಸಿದಂತೆ ಬಾಳೆಹೊನ್ನೂರು ಠಾಣೆಯ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದ ನಿಮಿತ್ತ ಕ್ರಮ ಜರುಗಿಸಲಾಗಿದೆ. ಎಎಸ್‌ಐ ಪದ್ಮಾಕ್ಷ, ಹೆಡ್‌ ಕಾನ್‌ಸ್ಟೆಬಲ್‌ ಬಸಂತಕುಮಾರ್‌, ಕಾನ್‌ಸ್ಟೆಬಲ್‌ಗಳಾದ ರಘುವೀರ್‌, ಸಂತೋಷ್‌ ಅವರನ್ನು ಅಮಾನತು ಮಾಡಲಾಗಿದೆ.

12 ವರ್ಷದ ಬಾಲಕಿ ಅತ್ಯಾಚಾರ ಯತ್ನ ಪ್ರಕರಣದ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತರಲಾಗಿತ್ತು. ಪೊಲೀಸರ ಕಣ್ಣುತಪ್ಪಿಸಿ ಠಾಣೆಯಿಂದ ಆರೋಪಿ ಪರಾರಿಯಾಗಿದ್ದ. ಶೋಧ ಕಾರ್ಯಾಚರಣೆ ನಡೆಸಿ ಆತನನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT
ಸಾರಾಂಶ

‘ಪೊಕ್ಸೊ’ (ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದಲ್ಲಿ ಬಂಧಿಸಿದ್ದ ಆರೋಪಿ ಠಾಣೆಯಿಂದ ಪರಾರಿಯಾಗಿದ್ದಕ್ಕೆ ಸಂಬಂಧಿಸಿದಂತೆ ಬಾಳೆಹೊನ್ನೂರು ಠಾಣೆಯ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.