ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ವರಸಿದ್ಧಿ ವೇಣುಗೋಪಾಲ್, ಉಪಾಧ್ಯಕ್ಷ ಸ್ಥಾನಕ್ಕೆ ಉಮಾದೇವಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಗುರುವಾರ ನಡೆದ ಪಕ್ಷದ ನಗರ ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪಕ್ಷದಲ್ಲಿ ಕಾರ್ಯನಿರ್ವಹಣೆ, ಮೀಸಲಾತಿ, ಹಿರಿತನ ಮೊದಲಾವುಗಳನ್ನು ಪರಿಗಣಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವರಸಿದ್ಧಿ ವೇಣುಗೋಪಾಲ್ ಅವರು 26ನೇ ವಾರ್ಡ್‌ನಿಂದ ಹಾಗೂ ಉಮಾದೇವಿ ಅವರು 11ನೇ ವಾರ್ಡ್‌ನಿಂದ ಆಯ್ಕೆಯಾಗಿದ್ದಾರೆ.
ಚುನಾವಣೆ ಇಂದು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಜ. 21ರಂದು ಚುನಾವಣೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಚುನಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಹಿರಿಯ ಉಪವಿಭಾಗಾಧಿಕಾರಿ ಡಾ.ಎಚ್.ಎಲ್. ನಾಗರಾಜ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಅಧ್ಯಕ್ಷ ಸ್ಥಾನ – ಹಿಂದುಳಿದ ವರ್ಗ ‘ಎ’ ಹಾಗೂ ಉಪಾಧ್ಯಕ್ಷ ಸ್ಥಾನ– ಹಿಂದುಳಿದ ವರ್ಗ ‘ಬಿ’ ಮೀಸಲಾತಿ ಇದೆ.
ನಗರಸಭೆಯಲ್ಲಿ ಒಟ್ಟು 35 ವಾರ್ಡ್‌ಗಳಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಜಯ ಗಳಿಸಿ ನಿಚ್ಚಳ ಬಹುಮತ ಪಡೆದಿದೆ.
‘ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಹಲವು ಆಕಾಂಕ್ಷಿಗಳು ಇದ್ದರು. ಪಕ್ಷದ ಸಮನ್ವಯ ಸಮಿತಿ ತೀರ್ಮಾನ ಅಂತಿಮ. ಇದೇ ಪ್ರಥಮ ಬಾರಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿರುವ ವರಸಿದ್ಧಿ ವೇಣುಗೋಪಾಲ್ ಅವರಿಗೆ ಅಧ್ಯಕ್ಷರಾಗುವ ಅದೃಷ್ಟ ಒಲಿದಿದೆ’ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದರು.
ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ವರಸಿದ್ಧಿ ವೇಣುಗೋಪಾಲ್, ಉಪಾಧ್ಯಕ್ಷ ಸ್ಥಾನಕ್ಕೆ ಉಮಾದೇವಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.