ನರಸಿಂಹರಾಜಪುರ: ಪಟ್ಟಣದ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನದ ವೇಳೆಗೆ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.
ಭಾನುವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ 12.30ರ ವೇಳೆಗೆ ಆರಂಭವಾದ ಮಳೆ ಧಾರಾಕಾರವಾಗಿ ಸುರಿಯಿತು. ಮಿನಿ ವಿಧಾನಸೌಧದ ಸಮೀಪದ ಎಬಿಸಿ ಎಲೆಕ್ಟ್ರಾನಿಕ್ಸ್ ಅಂಗಡಿಯ ಮುಂಭಾಗದಿಂದ ಚರಂಡಿ ನೀರು ಸರಾಗವಾಗಿ ಹರಿಯದೆ ಮುಖ್ಯರಸ್ತೆ ಒಂದು ಭಾಗ ಸಂಪೂರ್ಣ ಜಲಾವೃತವಾಗಿತ್ತು. ಅಂಗಡಿ, ಮನೆಗಳಿಗೂ ನೀರು ನುಗ್ಗಿತು. ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಮಳೆ ನಿಂತ ನಂತರ ಮಂಜುಕವಿದ ವಾತಾವರಣ ಉಂಟಾಗಿತ್ತು. ಸಂಜೆಯಾದರೂ ಮೋಡಕವಿದ ವಾತಾವರಣ ಮುಂದುವರಿದಿತ್ತು.
ಬಿರುಸು ಮಳೆ
ಕೊಪ್ಪ: ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವೆಡೆ ಭಾನುವಾರ ಬಿರುಸು ಮಳೆಯಾಗಿದೆ. ಭಾನುವಾರ ಇಡೀ ದಿನ ಮೋಡ ಮುಸುಕಿದ ವಾತಾವರಣ ಇತ್ತು. ಮಧ್ಯಾಹ್ನದ ಹೊತ್ತಿಗೆ ಪಟ್ಟಣದಲ್ಲಿ ಬಿರುಸು ಮಳೆ ಸುರಿಯಿತು. ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಈ ಸಂದರ್ಭ ವಿದ್ಯುತ್ ವ್ಯತ್ಯಯವಾಗಿತ್ತು.
ಎರಡು ದಿನಗಳಿಂದ ಬಿಸಿಲಿನ ವಾತಾವರಣ ಇತ್ತು. ಶನಿವಾರ ಸಂಜೆಯಿಂದ ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತು. ಅಕಾಲಿಕ ಮಳೆಯಿಂದಾಗಿ ತಾಲ್ಲೂಕಿನ ರೈತರಿಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ.
ನರಸಿಂಹರಾಜಪುರ ಪಟ್ಟಣದ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನದ ವೇಳೆಗೆ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.