ADVERTISEMENT

ಕಾಂಗ್ರೆಸ್ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ: ಸಚಿವ ಭಗವಂತ ಖೂಬಾ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 8:34 IST
Last Updated 13 ಅಕ್ಟೋಬರ್ 2021, 8:34 IST
ಕೇಂದ್ರ ಸಚಿವ ಭಗವಂತ ಖೂಬಾ
ಕೇಂದ್ರ ಸಚಿವ ಭಗವಂತ ಖೂಬಾ   

ಚಿತ್ರದುರ್ಗ: ಕಾಂಗ್ರೆಸ್ ಮುಖಂಡರಾದ ವಿ.ಎಸ್. ಉಗ್ರಪ್ಪ ಹಾಗೂ ಸಲೀಂ  ಅವರಿಗೆ ತಮ್ಮ ಪಕ್ಷದ ಭ್ರಷ್ಟಾಚಾರದ ಬಗ್ಗೆ ತಡವಾಗಿ ಜ್ಞಾನೋದಯ ಆಗಿದೆ. ಈವರೆಗೆ ಈ ವಿಚಾರ ಮುಚ್ಚಿಟ್ಟಿದ್ದು ಏಕೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದರು.

ಮುರುಘಾ ಮಠದಲ್ಲಿ ಬುಧವಾರ ನಡೆದ ಕೃಷಿ ಮೇಳದಲ್ಲಿ ಪಾಲ್ಗೊಂಡ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

'ಸತ್ಯಾಸತ್ಯತೆಯನ್ನು ಕಾಂಗ್ರೆಸ್‌ ನಾಯಕರು ತಡವಾಗಿ ಬಾಯಿ ಬಿಟ್ಟಿದ್ದಾರೆ. ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಒಳಜಗಳ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಂಡರೆ ಬೇರೆಯವರಿಗೆ ಆಗಲ್ಲ. ಸಿದ್ದರಾಮಯ್ಯ ಅವರೊಂದಿಗಿನ ಮುನಿಸು ಅಂತ್ಯ ಕಂಡಿಲ್ಲ' ಎಂದು ಹೇಳಿದರು.

ADVERTISEMENT

'ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಂಘಪರಿವಾರದ  ಕಾರ್ಯಕರ್ತರ ಕೊಲೆ ನಡೆಯಿತು. ಹಿಂದೂಗಳನ್ನು ನಿಂದಿಸಿದರೆ ಮುಸ್ಲಿಮರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ ಎಂಬ ಭ್ರಮೆ ಸಿದ್ಧರಾಮಯ್ಯ ಅವರಲ್ಲಿದೆ. ಈ ಭ್ರಮೆಯಿಂದ ಅವರು ಹೊರ ಬರಬೇಕು' ಎಂದು ಹೇಳಿದರು.

ಸಾರಾಂಶ

ಕಾಂಗ್ರೆಸ್ ಮುಖಂಡರಾದ ವಿ.ಎಸ್. ಉಗ್ರಪ್ಪ ಹಾಗೂ ಸಲೀಂ  ಅವರಿಗೆ ತಮ್ಮ ಪಕ್ಷದ ಭ್ರಷ್ಟಾಚಾರದ ಬಗ್ಗೆ ತಡವಾಗಿ ಜ್ಞಾನೋದಯ ಆಗಿದೆ. ಈವರೆಗೆ ಈ ವಿಚಾರ ಮುಚ್ಚಿಟ್ಟಿದ್ದು ಏಕೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.