ಮಂಗಳೂರು: ಕರಾವಳಿಯಾದ್ಯಂತ ಶನಿವಾರ ಮಧ್ಯಾಹ್ನದಿಂದ ಆರಂಭವಾಗಿರುವ ಮಳೆ ಭಾನುವಾರವೂ ಮುಂದುವರಿದಿದೆ. ಮಂಗಳೂರು ನಗರದಲ್ಲಿ ರಾತ್ರಿ ವೇಳೆಗೆ ಭಾರೀ ಮಳೆ ಸುರಿದಿದ್ದು, ವಿವಿಧ ಕಡೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಯಿತು.
ಬಂಟ್ವಾಳ ತಾಲ್ಲೂಕಿನ ಬಿ.ಸಿ. ರೋಡು ಸೇರಿದಂತೆ ತಾಲ್ಲೂಕಿನ ಹಲವೆಡೆ ಶನಿವಾರ ರಾತ್ರಿ ಸಿಡಿಲು ಸಹಿತ ಉತ್ತಮ ಮಳೆಯಾಗಿದ್ದು, ಕೈಕಂಬದಿಂದ ಫರಂಗಿಪೇಟೆ ವರೆಗೆ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಸುಗಮ ವಾಹನ ಅಡಚಣೆಯಾಯಿತು.
ಧರ್ಮಸ್ಥಳ ಸ್ನಾನ ಘಟ್ಟದಿಂದ ಮುಂದೆ ಸಾಗುವಾಗ ಮಣ್ಣ ಪಳ್ಳದ ಕಿರು ಸೇತುವೆಯ ಮೇಲೆ ನೀರು ಹರಿದ ಕಾರಣ ಒಂದೂವರೆ ತಾಸಿಗೂ ಅಧಿಕ ಸಮಯ ರಸ್ತೆ ಸಂಚಾರಕ್ಕೆ ತಡೆಯಾಯಿತು.
ಅಂಗಡಿಗಳಿಗೆ ನೀರು: ರಾತ್ರಿ ವೇಳೆ ದಿಢೀರ್ ಮಳೆ ಬಂದ ಕಾರಣ ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ತಡೆಯುಂಟಾಯಿತು. ಕೊಟ್ಟಾರ, ಫೋರ್ತ್‌ಮೈಲ್ ಪ್ರದೇಶ ಗಳಲ್ಲಿ ಚರಂಡಿಯಲ್ಲಿ ನೀರು ತುಂಬಿ ಅಂಗಡಿಗಳಿಗೆ ನುಗ್ಗಿದೆ.
ಮಂಗಳೂರು: ಕರಾವಳಿಯಾದ್ಯಂತ ಶನಿವಾರ ಮಧ್ಯಾಹ್ನದಿಂದ ಆರಂಭವಾಗಿರುವ ಮಳೆ ಭಾನುವಾರವೂ ಮುಂದುವರಿದಿದೆ. ಮಂಗಳೂರು ನಗರದಲ್ಲಿ ರಾತ್ರಿ ವೇಳೆಗೆ ಭಾರೀ ಮಳೆ ಸುರಿದಿದ್ದು, ವಿವಿಧ ಕಡೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಯಿತು. ಬಂಟ್ವಾಳ ತಾಲ್ಲೂಕಿನ ಬಿ.ಸಿ. ರೋಡು ಸೇರಿದಂತೆ ತಾಲ್ಲೂಕಿನ ಹಲವೆಡೆ ಶನಿವಾರ ರಾತ್ರಿ ಸಿಡಿಲು ಸಹಿತ ಉತ್ತಮ ಮಳೆಯಾಗಿದ್ದು, ಕೈಕಂಬದಿಂದ ಫರಂಗಿಪೇಟೆ ವರೆಗೆ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಸುಗಮ ವಾಹನ ಅಡಚಣೆಯಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.