ದಾವಣಗೆರೆ: ವಾರಾಂತ್ಯದ ಕರ್ಫ್ಯೂ ಇದ್ದರೂ ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಅವರು ತನ್ನ ಜನುಮ ದಿನವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ.
ದಾವಣಗೆರೆ ಕೆ.ಬಿ. ಬಡಾವಣೆಯಲ್ಲಿರುವ ತನ್ನ ಮನೆಯ ಮುಂದೆ ಶಾಮಿಯಾನ, ವೇದಿಕೆ, ಕುರ್ಚಿಗಳನ್ನು ಹಾಕಲಾಗಿತ್ತು. ಅಭಿಮಾನಿಗಳು, ಜನಪ್ರತಿನಿಧಿಗಳು, ಬಿಜೆಪಿ ಕಾರ್ಯಕರ್ತರು, ಅಧಿಕಾರಿಗಳು, ಪೊಲೀಸರು ಭಾಗವಹಿಸಿ ಶಾಸಕರಿಗೆ ಶುಭಕೋರಿದರು. ಮಾಸ್ಕ್, ಅಂತರ ನಿಯಮಗಳಿಲ್ಲದೇ ಜನುಮದಿನದ ಆಚರಣೆ ನಡೆಯಿತು. ಬಂದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
‘ನಮ್ಮಿಂದ ಯಾರೂ ಹುಟ್ಟಿದ ಹಬ್ಬದ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ. ನಮಗೆ ಯಾವುದೇ ಮಾಹಿತಿ ಇಲ್ಲ’ ಎಂದು ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ನಿಯಮ, ವಾರಾಂತ್ಯ ಕರ್ಫ್ಯೂ ನಿಯಮ ಜನಸಾಮಾನ್ಯರಿಗೆ, ವಿರೋಧ ಪಕ್ಷಗಳಿಗೆ ಮಾತ್ರವೇ? ಬಿಜೆಪಿ ಶಾಸಕರಿಗೆ ಅನ್ವಯವಾಗುದಿಲ್ಲವೇ? ಕಳೆದ ವಾರ ಹೋರಿ ಹಬ್ಬದಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೋವಿಡ್ ನಿಯಮ ಮುರಿದಿದ್ದರು. ಈ ವಾರ ಜಗಳೂರು ಶಾಸಕರು ನಿಯಮ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹರೀಶ್ ಬಸಾಪುರ ಟೀಕಿಸಿದ್ದಾರೆ.
ವಾರಾಂತ್ಯದ ಕರ್ಫ್ಯೂ ಇದ್ದರೂ ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಅವರು ತನ್ನ ಜನುಮ ದಿನವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.