ಅಳ್ನಾವರ: ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಮೀಸಲಿಡಬೇಕಾದ ಅನುದಾನದ ಬಗ್ಗೆ ಚರ್ಚಿಸಲು ಸೋಮವಾರ ಕರೆಯಲಾಗಿದ್ದ ಬಜೆಟ್ ಪೂರ್ವಭಾವಿ ಸಭೆಯನ್ನು ಮಾಹಿತಿ ಕೊರತೆಯಿಂದಾಗಿ ಮುಂದೂಡಲಾಯಿತು.
ಪಟ್ಟಣ ಪಂಚಾಯ್ತಿ ಸಭಾಭವನದಲ್ಲಿ ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್ ಮಾತನಾಡಿ ‘ಕಳೆದ ಬಾರಿ ನಮ್ಮ ಬಿಜೆಟ್ ಗಾತ್ರ ಎಷ್ಟಿತ್ತು. ಯಾವ ಕಾಮಗಾರಿಗೆ ಎಷ್ಟು ಅನುದಾನ ಮೀಸಲಿಡಲಾಗಿತ್ತು; ಆಗಿರುವ ಕೆಲಸ ಎಷ್ಟು’ ಎನ್ನುವ ಮಾಹಿತಿ ಕೇಳಿದರು. ಇದಕ್ಕೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡದ ಕಾರಣ ಸಭೆ ಮುಂದೂಡಲಾಯಿತು.
ಆರಂಭದಲ್ಲಿ ಸದಸ್ಯ ತಮೀಮ ತೇರಗಾಂವ, ಅಮೂಲ ಗುಂಜೀಕರ ಮಾತನಾಡಿ ‘ಪಟ್ಟಣದ ವಿವಿಧೆಡೆ ಅಂಗನವಾಡಿ ಕಟ್ಟಡಗಳು ನಿರ್ಮಾಣ ಕಾರ್ಯ ಆರಂಭಿಸಲಾಗಿದೆ. ಅದರಲ್ಲಿ ಪಟ್ಟಣ ಪಂಚಾಯ್ತಿಗೆ ಈ ಕುರಿತು ಯಾಕೆ ಮಾಹಿತಿ ನೀಡಿಲ್ಲ’ ಎಂದು ಏರುಧ್ವನಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.
ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮಂಗಳಾ ರವಳಪ್ಪನವರ, ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್, ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಯಲಕಪಾಟಿ ಹಾಗೂ ಸರ್ವ ಸದಸ್ಯರು, ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ ಇದ್ದರು.
ಅಳ್ನಾವರ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಮೀಸಲಿಡಬೇಕಾದ ಅನುದಾನದ ಬಗ್ಗೆ ಚರ್ಚಿಸಲು ಸೋಮವಾರ ಕರೆಯಲಾಗಿದ್ದ ಬಜೆಟ್ ಪೂರ್ವಭಾವಿ ಸಭೆಯನ್ನು ಮಾಹಿತಿ ಕೊರತೆಯಿಂದಾಗಿ ಮುಂದೂಡಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.