ಗದಗ: ‘ಪ್ರತಿಯೊಬ್ಬ ವ್ಯಕ್ತಿ ಕೂಡ ನೆಮ್ಮದಿಯಿಂದ ಜೀವನ ನಡೆಸಲು ಕಾನೂನಿನ ಅರಿವು ಅವಶ್ಯಕ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗೆರೆ ಹೇಳಿದರು.
ನಗರದ ಆದರ್ಶ ಶಿಕ್ಷಣ ಸಂಸ್ಥೆಯ ವಿಶ್ವನಾಥ ರಾಮಚಂದ್ರಪ್ಪ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್‌ನ ಐಕ್ಯೂಎಸಿ ಅಡಿಯಲ್ಲಿ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ, ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ವಕೀಲರ ಸಂಘ, ವಾರ್ತಾ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ನೆಹರೂ ಯುವಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆ, ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ, ಯುವ ಸಪ್ತಾಹ ಹಾಗೂ ಕಾನೂನು ಅರಿವು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಇತ್ತೀಚಿನ ದಿನಗಳಲ್ಲಿ ಯುವಕರು ಸಂಚಾರ ನಿಯಮಗಳು ಉಲ್ಲಂಘಿಸಿ ವಾಹನ ಓಡಿಸುತ್ತಿದ್ದಾರೆ. ಇದರಿಂದ ಅಪಘಾತಗಳು ಸಂಭವಿಸಿ ಬಾಲಾಪರಾಧಿಗಳ ಪಟ್ಟಿಗೆ ಸೇರುತ್ತಿದ್ದಾರೆ. ನಿಯಮ, ಕಾನೂನುಗಳ ಪಾಲನೆಗೆ ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಆದರ್ಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆನಂದ ಪೋತ್ನಿಸ್ ಮಾತನಾಡಿ, ‘ಕಾನೂನಿನ ಮುಂದೆ ನಾವೆಲ್ಲರೂ ಒಂದೇ ಎಂಬ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನತೆಯಿಂದ ಬಾಳಬಹುದು. ಆದ್ದರಿಂದ ಪ್ರತಿಯೊಬ್ಬರೂ ಕಾನೂನಿನ ಅರಿವು ಹೊಂದಬೇಕು. ಆಗ ಮಾತ್ರ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತವೆ’ ಎಂದು ಹೇಳಿದರು.
ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಎ.ಮೌಲ್ವಿ, ‘ಯುವಕರಿಗೆ ಕಾನೂನು ಜಾಗೃತಿ ಅವಶ್ಯಕವಾಗಿದೆ’ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಬಿ.ವಿ.ಪಾಟೀಲ್, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ರಜನಿ ಎನ್., ಸಂಸ್ಥೆಯ ಆಡಳಿತಾಧಿಕಾರಿ ಪಿ.ಆರ್.ಇನಾಂದಾರ, ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಪ್ರೊ. ಕೆ.ಗಿರೀಶ್ ಕುಮಾರ್, ಎನ್‌ಎಸ್‌ಎಸ್ ವಿಭಾಗದ ಕಾರ್ಯಕ್ರಮಾಧಿಕಾರಿ ಪ್ರೊ. ಬಾಹುಬಲಿ ಜೈನರ್, ವಿದ್ಯಾರ್ಥಿ ಮುಖಂಡರಾದ ಅಶ್ವತ್ಥಾಮ ಚೌವಡಿ, ಮಹಾವಿದ್ಯಾಲಯದ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗ ಇದ್ದರು.
ಗದಗ: ‘ಪ್ರತಿಯೊಬ್ಬ ವ್ಯಕ್ತಿ ಕೂಡ ನೆಮ್ಮದಿಯಿಂದ ಜೀವನ ನಡೆಸಲು ಕಾನೂನಿನ ಅರಿವು ಅವಶ್ಯಕ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗೆರೆ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.