ಕಲಬುರಗಿ: 1977ರಿಂದ ನಾನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ವಿಭಜಕ ಹುನ್ನಾರದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಆರ್‌ಎಸ್‌ಎಸ್ ವಿರುದ್ಧ ಮಾತನಾಡುವುದು ಬೆಂಕಿ ಜೊತೆಗೆ ಸರಸ ಆಡಿದಂತೆ ಎಂಬ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮಾತಿಗೆ ಪ್ರತಿಕ್ರಿಯಿಸಿದರು.
ಈಗಷ್ಟೇ ಅಲ್ಲ. ಮೊದಲಿಂದಲೂ ಸಂಘ ಪರಿವಾರದ ನೀತಿಗಳ ಬಗ್ಗೆ ಮಾತನಾಡುತ್ತಿದ್ದೇನೆ ಎಂದರು.
ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳ ಉಪಚುನಾವಣೆ ನಾವು ಬಯಸಿರಲಿಲ್ಲ. ಆದರೆ, ಆ ಕ್ಷೇತ್ರಗಳ ಶಾಸಕರಾಗಿದ್ದ ಎಂ.ಸಿ. ಮನಗೂಳಿ, ಸಿ.ಎಂ. ಉದಾಸಿ ಅವರ ನಿಧನದಿಂದ ಉಪಚುನಾವಣೆ ಎದುರಾಯಿತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
1977ರಿಂದ ನಾನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ವಿಭಜಕ ಹುನ್ನಾರದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.