ಶ್ರೀರಂಗಪಟ್ಟಣ: ಪಟ್ಟಣದ ಮಹತ್ವದ ಸ್ಮಾರಕ ಟಿಪ್ಪು (ಜಾಮಿಯಾ) ಮಸೀದಿಯ ರಕ್ಷಣೆಗೆ ಭಾರತೀಯ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ಕ್ರಮ ವಹಿಸಬೇಕು ಎಂದು ಟಿಪ್ಪು ವಕ್ಫ್ ಎಸ್ಟೇಟ್ ಅಧ್ಯಕ್ಷ ಹಾಗೂ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದರು.
ಟಿಪ್ಪು ಮಸೀದಿಯ ಬಗ್ಗೆ ಅರಸೀಕೆರೆಯ ಕಾಳಿಕಾಶ್ರಮದ ಋಷಿ ಕುಮಾರ ಸ್ವಾಮೀಜಿ ನೀಡಿರುವ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಗುರುವಾರ ಮಸೀದಿಗೆ ಭೇಟಿ ನೀಡಿದ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.
1994ರ ಕಾಯ್ದೆ ಅನ್ವಯ ಸ್ಮಾರಕ ಮತ್ತು ಪ್ರಾರ್ಥನಾ ಮಂದಿರಗಳ ಅಸ್ತಿತ್ವಕ್ಕೆ ಧಕ್ಕೆ ಉಂಟು ಮಾಡುವುದು ಅಪರಾಧ. ಅಧಿಕಾರಿಗಳು ಅದಕ್ಕೆ ಅವಕಾಶ ನೀಡಬಾರದು ಎಂದರು.
ಶ್ರೀರಂಗಪಟ್ಟಣದಲ್ಲಿ ವಿವಿಧ ಧರ್ಮದ ಜನರು ಅಣ್ಣ ತಮ್ಮಂದಿರಂತೆ ಇದ್ದಾರೆ. ಆದರೆ, ಹೊರಗಿನವರು ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ಅಂತಹವರ ಬಗ್ಗೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ಟಿಪ್ಪು ಸುಲ್ತಾನ್ ಮತ್ತು ಅವರ ತಂದೆ ಹೈದರಾಲಿ ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯ, ಶೃಂಗೇರಿ ದೇಗುಲ ಸೇರಿದಂತೆ ಇತರ ದೇವಾಲಯಗಳಿಗೆ ಉದಾರ ಕೊಡುಗೆ ನೀಡಿದ್ದಾರೆ. ತಮ್ಮ ರಾಜ್ಯದಲ್ಲಿ
ಸಾರಾಯಿ ಮತ್ತು ಜೂಜು ನಿಷೇಧಿಸಿ ದ್ದರು. ರೈತರಿಗೆ ಸಾಲ, ನೀರಾವರಿ ಸೌಲಭ್ಯ ಕಲ್ಪಿಸಿದ್ದರು. ಟಿಪ್ಪು ಕುರಿತ ಊಹಾಪೋಹ ನಂಬದೆ ಇಂಥ ಧನಾತ್ಮಕ ಅಂಶಗಳ ಬಗ್ಗೆ ತಿಳಿದುಕೊ ಳ್ಳಬೇಕು. ಎಲ್ಲರೂ ಸಾಮರಸ್ಯದಿಂದ ಬದುಕಬೇಕು ಎಂದು ಹೇಳಿದರು.
ಭಾರತೀಯ ಪುರಾತತ್ವ ಮತ್ತು ಸರ್ವೇಕ್ಷಣಾ ಸಂರಕ್ಷಣಾ ಸಹಾಯಕ ಸುನಿಲ್, ಸಿಪಿಐ ಬಿ.ಎನ್.ಪುನೀತ್, ಟಿಪ್ಪು ವಕ್ಫ್ ಎಸ್ಟೇಟ್ ಕಾರ್ಯದರ್ಶಿ ಮಹಮದ್ ಇರ್ಫಾನ್ ಜತೆಗಿದ್ದರು.
ಪಟ್ಟಣದ ಮಹತ್ವದ ಸ್ಮಾರಕ ಟಿಪ್ಪು (ಜಾಮಿಯಾ) ಮಸೀದಿಯ ರಕ್ಷಣೆಗೆ ಭಾರತೀಯ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ಕ್ರಮ ವಹಿಸಬೇಕು ಎಂದು ಟಿಪ್ಪು ವಕ್ಫ್ ಎಸ್ಟೇಟ್ ಅಧ್ಯಕ್ಷ ಹಾಗೂ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.