ADVERTISEMENT

ಮೈಸೂರು: ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2022, 11:54 IST
Last Updated 20 ಜನವರಿ 2022, 11:54 IST
   
ಮೈಸೂರು: ಕಬಿನಿ, ಕಾವೇರಿ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಇಲ್ಲಿನ ಕಾಡಾ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು ‌

ಎರಡೂ ಜಲಾಶಯಗಳೂ ತುಂಬಿವೆ. ಈಗ ನೀರು ಹರಿಸಿದರೆ ಬೇಸಿಗೆ ಬೆಳೆಗಳನ್ನು ಬೆಳೆಯಲು ಸಹಕಾರಿಯಾಗಲಿದೆ. ದನಕರುಗಳಿಗೆ ಮೇವು ಒದಗಿಸಲೂ ಅನುಕೂಲವಾಗಲಿದೆ ಎಂದು ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು‌.

ಬಣ್ಣಾರಿ ಸಕ್ಕರೆ ಕಾರ್ಖಾ‌ನೆಯು ಸರ್ಕಾರ ಜಾರಿ ಮಾಡಿರುವ ಕಬ್ಬು ಬೆಳೆಗಾರರ ದ್ವಿಪಕ್ಷೀಯ ಒಪ್ಪಂದ ಪತ್ರವನ್ನು ತನಗೆ ಬೇಕಾದಂತೆ ಬದಲಾಯಿಸಿಕೊಂಡಿದ್ದು, ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು

ADVERTISEMENT
ಸಾರಾಂಶ

ಎರಡೂ ಜಲಾಶಯಗಳೂ ತುಂಬಿವೆ. ಈಗ ನೀರು ಹರಿಸಿದರೆ ಬೇಸಿಗೆ ಬೆಳೆಗಳನ್ನು ಬೆಳೆಯಲು ಸಹಕಾರಿಯಾಗಲಿದೆ. ದನಕರುಗಳಿಗೆ ಮೇವು ಒದಗಿಸಲೂ ಅನುಕೂಲವಾಗಲಿದೆ ಎಂದು ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು‌.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.