ಮೈಸೂರು: ಜಿಲ್ಲೆಯಲ್ಲಿ ಈಚೆಗೆ ನಡೆದ 10 ಜಾನುವಾರು ಕಳವು ಪ್ರಕರಣಗಳಲ್ಲಿ 6 ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು 12 ಹಸುಗಳು ಹಾಗೂ ಒಂದು ಕರುವನ್ನು ವಶಪಡಿಸಿಕೊಂಡಿದ್ದಾರೆ.
ನಂಜನಗೂಡು ತಾಲ್ಲೂಕಿನಲ್ಲಿ ಇಬ್ಬರು ಹಾಗೂ ಹುಣಸೂರು ತಾಲ್ಲೂಕಿನಲ್ಲಿ 4 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರ್.ಚೇತನ್ ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಕಲಿ ನಂದಿನಿ ತುಪ್ಪ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ7ಕ್ಕೆ ಏರಿದೆ. ಇನ್ನೂ ಮುಖ್ಯ ಅರೋಪಿಯ ಶೋಧ ಕಾರ್ಯ ನಡೆದಿದ್ದು, ಹೆಚ್ಚಿನ ವಿವರ ಬಹಿರಂಗಪಡಿಸಲು ಸಾಧ್ಯ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಮೈಸೂರು ಜಿಲ್ಲೆಯಲ್ಲಿ ಈಚೆಗೆ ನಡೆದ 10 ಜಾನುವಾರು ಕಳವು ಪ್ರಕರಣಗಳಲ್ಲಿ 6 ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು 12 ಹಸುಗಳು ಹಾಗೂ ಒಂದು ಕರುವನ್ನು ವಶಪಡಿಸಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.