ಮೈಸೂರು: 'ರಾತ್ರಿ ಎಂಟು ಗಂಟೆಗೆ ಬಾಗಿಲು ಮುಚ್ಚುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಗುರುವಾರ, ಶುಕ್ರವಾರ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ, ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಇಲ್ಲಿ ಹೇಳಿದರು.
ಅರಮನೆ ಆವರಣದಲ್ಲಿ ಮಾವುತರು ಮತ್ತು ಕಾವಾಡಿಗರಿಗೆ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಭಾಗವಹಿಸಿದ ಬಳಿಕ ಸಚಿವರು ಪತ್ರಕತ೯ರೊಂದಿಗೆ ಮಾತನಾಡಿದರು.
'ಚಾಮುಂಡೇಶ್ವರಿ ದೇವಸ್ಥಾನವನ್ನು ರಾತ್ರಿ 8 ಗಂಟೆಗೆ ಬಂದ್ ಮಾಡಲಾಗುತ್ತಿತ್ತು. ನಗರದ ದೀಪಾಲಂಕಾರ ನೋಡಿಕೊಂಡು ದೇವಸ್ಥಾನಕ್ಕೆ ತೆರಳುವವರು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲೆಂದು ಶುಕ್ರವಾರದವರೆಗೆ ರಾತ್ರಿ 10 ಗಂಟೆಯವರೆಗೆ ದರ್ಶನದ ಅವಧಿ ವಿಸ್ತರಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವೆ' ಎಂದು ತಿಳಿಸಿದರು.
'ಜಂಬೂಸವಾರಿಗೆ ಎಲ್ಲ ಸಿದ್ಧತೆ ಆಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸದೆ 500 ಜನರಿಗೆ ಜಂಬೂಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಕೆಲವರು ಒಂದು ವಾರ, ಮತ್ತೆ ಕೆಲವರು ದೀಪಾವಳಿವರೆಗೆ ದೀಪಾಲಂಕಾರ ವಿಸ್ತರಣೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಸೋಮಶೇಖರ್ ಹೇಳಿದರು.
ಡಿ.ಕೆ.ಶಿವಕುಮಾರ್ ಪಸೆ೯ಂಟೇಜ್ ವಿಚಾರದ ಕುರಿತಂತೆ ಪತ್ರಕತ೯ರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, 'ನಮ್ಮ ಪಕ್ಷದ ಹಿರಿಯ ನಾಯಕರು ಈ ಬಗ್ಗೆ ಹೇಳಿದ್ದಾರೆ. ನಾನು ಶಾಸಕನಾಗಿದ್ದಾಗ ಇದೇನು ಇರಲಿಲ್ಲ. ಆದರೆ ಈಗ ಅವರಿಗೆ ಗೊತ್ತಿರಬಹುದು ಅದಕ್ಕೆ ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ ಷಡ್ಯಂತ್ರ ನಡೀತಿದೆ ಎಂದು ಹಿಂದೆಯೇ ಹೇಳಿದ್ದೆ. ಸಿದ್ದರಾಮಯ್ಯ ವರ್ಸಸ್ ಡಿ.ಕೆ. ಶಿವಕುಮಾರ್ ನಡೀತಿದೆ. ಇದು ಆ ಪಕ್ಷದ ಆಂತರಿಕ ವಿಚಾರ' ಎಂದರು.
23 ಸಚಿವರನ್ನು ಸಿದ್ದರಾಮಯ್ಯ ಬೀದಿಪಾಲು ಮಾಡಿದರು ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, 'ಸಿದ್ದರಾಮಯ್ಯ ಪಕ್ಷ ಬಿಡುವಂತೆ ಹೇಳಿಲ್ಲ. ಇದು ಹಳೆ ವಿಷಯ. ಇದನ್ನೇ ಮತ್ತೆ ಮತ್ತೆ ಹೇಳುವುದು ಸರಿಯಲ್ಲ.
ಕುಮಾರಸ್ವಾಮಿ ಅವರು ರಾತ್ರಿ 10 ಗಂಟೆಗೆ ಮಲಗಿ, ಕಣ್ಮುಚ್ಚಿಕೊಂಡು ಯೋಚಿಸಿದರೆ 23 ಜನ ಯಾಕೆ ಹೋದರು ಅಂತ ಗೊತ್ತಾಗುತ್ತದೆ' ಎಂದು ತಿರುಗೇಟು ನೀಡಿದರು.
'ರಾತ್ರಿ ಎಂಟು ಗಂಟೆಗೆ ಬಾಗಿಲು ಮುಚ್ಚುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಗುರುವಾರ, ಶುಕ್ರವಾರ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ, ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಇಲ್ಲಿ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.