ADVERTISEMENT

ಮೈಸೂರಿನ ಪುರಭವನದಲ್ಲಿ 20ರಂದು ವಾಲ್ಮೀಕಿ ಜಯಂತಿ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 9:44 IST
Last Updated 18 ಅಕ್ಟೋಬರ್ 2021, 9:44 IST
ಮೈಸೂರಿನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ‘ಮೈಸೂರು ನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ’ಯ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಎಸ್.ರೋಹಿತ್‌ ಮಾತನಾಡಿದರು
ಮೈಸೂರಿನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ‘ಮೈಸೂರು ನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ’ಯ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಎಸ್.ರೋಹಿತ್‌ ಮಾತನಾಡಿದರು   

ಮೈಸೂರು: ನಗರದ ಪುರಭವನದಲ್ಲಿ ಇದೇ 20ರಂದು ‘ಮೈಸೂರು ನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ’ಯ ಪರಿಶಿಷ್ಟ ಪಂಗಡ ವಿಭಾಗವು ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಯೋಜಿಸಿದೆ.

‘ಶಾಸಕ ಅನಿಲ್‌ ಕುಮಾರ್‌ ಬುಧವಾರ ಸಂಜೆ 4.30ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ, ಕಾಂಗ್ರೆಸ್‌ ಮುಖಂಡ ಎಚ್‌.ಸಿ.ಮಹದೇವಪ್ಪ, ಶಾಸಕರಾದ ತನ್ವೀರ್‌ಸೇಠ್‌, ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ’ ಎಂದು ವಿಭಾಗದ ನಗರ ಘಟಕದ ಅಧ್ಯಕ್ಷ ಎಸ್.ರೋಹಿತ್‌ ಅವರು ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಕೊರೊನಾ ವಾರಿಯರ್‌ಗಳನ್ನು ಸನ್ಮಾನಿಸಲಾಗುವುದು. ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ನಾಗರಿಕರು ಭಾಗವಹಿಸಬೇಕು’ ಎಂದು ಅವರು ಮನವಿ ಮಾಡಿದರು.

ADVERTISEMENT

ಗೋಷ್ಠಿಯಲ್ಲಿ ವಿಭಾಗದ ಪ್ರಧಾನ ಕಾರ್ಯದರ್ಶಿ ಆರ್‌.ಯೋಗೇಶ್‌ ನಾಯಕ್‌, ಸಂಘಟನಾ ಕಾರ್ಯದರ್ಶಿ  ಕೆಂಪನಾಯಕ, ರಮೇಶ್, ರಂಗಸ್ವಾಮಿ ಇದ್ದರು.

ಸಾರಾಂಶ

ಮೈಸೂರಿನ ಪುರಭವನದಲ್ಲಿ ಇದೇ 20ರಂದು ‘ಮೈಸೂರು ನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ’ಯ ಪರಿಶಿಷ್ಟ ಪಂಗಡ ವಿಭಾಗವು ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಯೋಜಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.