ರಾಯಚೂರು: ‘ಅಭಿವೃದ್ಧಿ ವಿಷಯದಲ್ಲಿ ರಾಯಚೂರು ಜಿಲ್ಲೆಯನ್ನು ಮೊದಲಿನಿಂದ ಕಡೆಗಣಿಸಲಾಗುತ್ತಿದೆ. ಉತ್ತರ ಕರ್ನಾಟಕವೆಂದರೆ ಬೆಳಗಾವಿ, ಹುಬ್ಬಳ್ಳಿ–ಧಾರವಾಡ ಎಂದು ಪರಿಗಣಿಸಲಾಗಿದೆ. ಕಲ್ಯಾಣ ಕರ್ನಾಟಕವೆಂದರೆ ಬೀದರ್, ಕಲಬುರ್ಗಿ ಎರಡೇ ಜಿಲ್ಲೆಗಳು ಕಣ್ಣಿಗೆ ಕಾಣುತ್ತವೆ. ರಾಯಚೂರು ಬೇಡವಾಗಿದ್ದರೆ ತೆಲಂಗಾಣಕ್ಕೆ ಸೇರಿಸಿಬಿಡಿ’ ಎಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರು ಸಚಿವ ಪ್ರಭು ಚವಾಣ್ ಅವರೆದುರು ಈಚೆಗೆ ಆಕ್ರೋಶ ಹೊರಹಾಕಿದ ವಿಡಿಯೋ ವೈರಲ್ ಆಗುತ್ತಿದೆ.
ಪ್ರಗತಿ ಪರಿಶೀಲನೆಗಾಗಿ ಈಚೆಗೆ ನಗರಕ್ಕೆ ಬಂದಿದ್ದ ಸಚಿವರು ಪಕ್ಷದ ಕಚೇರಿಗೆ ತೆರಳಿದ್ದ ವೇಳೆ ಶಾಸಕರು ಭಾಷಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಆಗಿದೆ.
ತೆಲಂಗಾಣದ ಪತ್ರಿಕೆಗಳು ಶಾಸಕರ ಹೇಳಿಕೆ ಆಧರಿಸಿ ಸುದ್ದಿಗಳನ್ನು ಪ್ರಕಟಿಸಿದ್ದು, ತೆಲಂಗಾಣಕ್ಕೆ ಸೇರಬೇಕಾದ ಗಡಿ ಪ್ರದೇಶಗಳ ಬಗ್ಗೆ ರಾಜ್ಯ ಸರ್ಕಾರವು ಪ್ರಸ್ತಾಪ ಎತ್ತುವುದಕ್ಕೆ ಇದು ಸಕಾಲ. ರಾಯಚೂರು ತೆಲಂಗಾಣದ ಅಭಿವೃದ್ಧಿಯ ಭಾಗವಾಗಲು ಸಿದ್ಧವಿದೆ ಎಂದು ಬರೆಯಲಾಗಿದೆ.
ಈ ಬಗ್ಗೆ ‘ಪ್ರಜಾವಾಣಿ’ಗೆ ಸ್ಪಷ್ಟನೆ ನೀಡಿದ ಶಾಸಕ ಡಾ.ಶಿವರಾಜ ಪಾಟೀಲ, ‘ನಾನು ಕನ್ನಡ ಕನ್ನಡ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ಅಭಿವೃದ್ಧಿ ಮಾಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಹಾಗೇ ಹೇಳಿದ್ದೇನೆ. ಕನ್ನಡದಲ್ಲೇ ರಾಯಚೂರು ಎಂದೆಂದಿಗೂ ಇರಬೇಕು ಎಂದು ಬಯಸುತ್ತೇನೆ' ಎಂದರು.
ರಾಯಚೂರು: ‘ಅಭಿವೃದ್ಧಿ ವಿಷಯದಲ್ಲಿ ರಾಯಚೂರು ಜಿಲ್ಲೆಯನ್ನು ಮೊದಲಿನಿಂದ ಕಡೆಗಣಿಸಲಾಗುತ್ತಿದೆ. ಉತ್ತರ ಕರ್ನಾಟಕವೆಂದರೆ ಬೆಳಗಾವಿ, ಹುಬ್ಬಳ್ಳಿ–ಧಾರವಾಡ ಎಂದು ಪರಿಗಣಿಸಲಾಗಿದೆ. ಕಲ್ಯಾಣ ಕರ್ನಾಟಕವೆಂದರೆ ಬೀದರ್, ಕಲಬುರ್ಗಿ ಎರಡೇ ಜಿಲ್ಲೆಗಳು ಕಣ್ಣಿಗೆ ಕಾಣುತ್ತವೆ. ರಾಯಚೂರು ಬೇಡವಾಗಿದ್ದರೆ ತೆಲಂಗಾಣಕ್ಕೆ ಸೇರಿಸಿಬಿಡಿ’ ಎಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರು ಸಚಿವ ಪ್ರಭು ಚವಾಣ್ ಅವರೆದುರು ಈಚೆಗೆ ಆಕ್ರೋಶ ಹೊರಹಾಕಿದ ವಿಡಿಯೋ ವೈರಲ್ ಆಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.