PHOTOS | ರಾಮನಗರ: ಮುಳುಗಿದ ಕಾರುಗಳು, ಅಂಡರ್ಪಾಸ್ನಲ್ಲಿ ಸಿಲುಕಿದ ಬಸ್ ಪ್ರಯಾಣಿಕರು
Published 29 ಆಗಸ್ಟ್ 2022, 6:59 IST Last Updated 29 ಆಗಸ್ಟ್ 2022, 6:59 IST ರಾಮನಗರದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರೈಲು ನಿಲ್ದಾಣ ಪೂರ್ತಿ ಜಲಾವೃತಗೊಂಡಿದ್ದು, ಮೈಸೂರು- ಬೆಂಗಳೂರು ನಡುವೆ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ.
ರಾಮನಗರ: ತಾಲ್ಲೂಕಿನ ಬಿಳಗುಂಬ ಅಂಡರ್ ಪಾಸ್ ನಲ್ಲಿ ಸೋಮವಾರ ಬೆಳಿಗ್ಗೆ ಖಾಸಗಿ ಬಸ್ ಒಂದು ಮಳೆ ನೀರಿನ ಪ್ರವಾಹದಲ್ಲಿ ಸಿಲುಕಿದ್ದು, ಸ್ಥಳೀಯರು ನೆರವಿಗೆ ಧಾವಿಸಿ ರಕ್ಷಣೆ ಮಾಡಿದರು.ರಾಮನಗರ: ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ.ಬಸ್ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ ಸ್ಥಳೀಯರುರಾಮನಗರ: ಜಿಲ್ಲೆಯಾದ್ಯಂತ ಭಾನುವಾರ ಮಧ್ಯರಾತ್ರಿಯಿಂದ ಮಳೆ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಾಹನಗಳು ಮುಳುಗಡೆಯಾಗಿವೆ.ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿವೆ.ರಾಮನಗರದಲ್ಲಿ ಹಲವೆಡೆ ಮಳೆ ನೀರು ನುಗ್ಗಿದೆ. ರಾಮನಗರ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಶಾಲೆ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.ರಾಮನಗರ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಹಳ್ಳದಲ್ಲಿ ಮಳೆ ನೀರಿನ ಪ್ರವಾಹ ಜಲಪಾತದ ರೀತಿಯಲ್ಲಿ ಹರಿಯುತ್ತಿದ್ದು, ಪ್ರಯಾಣಿಕರೊಬ್ಬರು ರೈಲಿನಿಂದ ಅದನ್ನು ಸೆರೆ ಹಿಡಿದಿದ್ದಾರೆ. ಬಳಿಕ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತಗೊಂಡಿದೆಭಾರಿ ಮಳೆಯಿಂದಾಗಿ ಹಲವೆಡೆ ರಸ್ತೆ ಸಂಚಾರ ಸ್ಥಗಿತಕಾರುಗಳು ನೀರಿನಲ್ಲಿ ಮುಳುಗಿವೆ. ಅಂಡರ್ಪಾಸ್ಗೆ ನುಗ್ಗಿದ ಮಳೆ ನೀರುನೀರಿನಲ್ಲಿ ಮುಳುಗಿದ ಕಾರುರೈಲ್ವೆ ನಿಲ್ದಾಣಕ್ಕೆ ನುಗ್ಗಿದ ನೀರು.ಮಳೆ ಹಾನಿ: ನೀರಿನಲ್ಲಿ ಮುಳುಗಿದ ಕಾರುಗಳು