ADVERTISEMENT

ಅಡುಗೆ ಅನಿಲ ಸೋರಿಕೆ: ಬಿಸಿಯೂಟ ಕಾರ್ಯಕರ್ತೆಗೆ ಗಾಯ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 5:21 IST
Last Updated 21 ಜನವರಿ 2022, 5:21 IST

ಕಾರ್ಗಲ್:  ಅರಳಗೋಡಿನ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಅಡುಗೆ ಮಾಡುತ್ತಿದ್ದಾಗ ಅನಿಲ ಪೂರೈಕೆಯ ರಬ್ಬರ್ ಪೈಪ್‌ ಸೋರಿಕೆಯಲ್ಲಿ ಉಂಟಾದ ಅಗ್ನಿ ಆಕಸ್ಮಿಕದಿಂದ ಬಿಸಿಯೂಟ ಕಾರ್ಯಕರ್ತೆ ಗಾಯಗೊಂಡಿದ್ದಾರೆ.

ಬಿಸಿಯೂಟ ಕಾರ್ಯಕರ್ತೆ ನಾಗರತ್ನ ಅಡುಗೆ ಮಾಡುತ್ತಿದ್ದಾಗ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತ್ತು. ಸ್ಥಳೀಯರು ಬೆಂಕಿ ನಂದಿಸಿದರು. ಗಾಯಗೊಂಡ ನಾಗರತ್ನ ಅವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಆರ್. ಮೇಘರಾಜ್, ಉಪಾಧ್ಯಕ್ಷೆ ಲಕ್ಷ್ಮೀ ಕೃಷ್ಣಮೂರ್ತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ಮಂಜುಳಾ ಇಂಡೇನ್ ಗ್ಯಾಸ್ ಏಜೆನ್ಸಿ ವ್ಯವಸ್ಥಾಪಕ ಮೋಹನ್ ಎಂ. ಪೈ ಆರೋಗ್ಯ ವಿಚಾರಿಸಿ ವೈಯುಕ್ತಿಕ ಧನಸಹಾಯ ನೀಡಿದರು.

ಕಾರ್ಗಲ್ ಪೊಲೀಸ್ ಠಾಣಾ ಸಿಬ್ಬಂದಿ ಮತ್ತು ಪಂಚಾಯಿತಿ ಅಧಿಕಾರಿ ಸುರೇಶ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳಿಗೆ ಸೂಚಿಸಿದರು.

ಸಾರಾಂಶ

ಕಾರ್ಗಲ್: ಅರಳಗೋಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಅಡುಗೆ ಮಾಡುತ್ತಿದ್ದಾಗ ಅನಿಲ ಪೂರೈಕೆಯ ರಬ್ಬರ್ ಪೈಪ್‌ ಸೋರಿಕೆಯಲ್ಲಿ ಉಂಟಾದ ಅಗ್ನಿ ಆಕಸ್ಮಿಕದಿಂದ ಬಿಸಿಯೂಟ ಕಾರ್ಯಕರ್ತೆ ಗಾಯಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.