ಆನಂದಪುರ: ಸಮೀಪದ ಇರುವಕ್ಕಿಯ ಮೆಟ್ರಿಕ್ ಪೂರ್ವ ಇಂದಿರಾ ವಸತಿ ಶಾಲೆಯ 40 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ನಾಲ್ಕು ದಿನಗಳ ಹಿಂದೆ ಆರೋಗ್ಯ ಇಲಾಖೆಯಿಂದ ವಸತಿಶಾಲೆಯ 80ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. 40 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ವಸತಿಶಾಲೆಯನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.
ವಸತಿನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದ ತಾಲ್ಲೂಕು ವೈದ್ಯಾಧಿಕಾರಿ ಡಾ. ಮೋಹನ್, ‘ಕೊರೊನಾ ದೃಢಪಟ್ಟ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುವುದು. ದಿನಕ್ಕೆ ಎರಡು ಬಾರಿ ವಸತಿಶಾಲೆಯನ್ನು ಸ್ಯಾನಿಟೈಸ್ ಮಾಡಲು ಗ್ರಾಮಾಡಳಿತಕ್ಕೆ ತಿಳಿಸಲಾಗಿದೆ. ಪ್ರತಿದಿನ ಒಬ್ಬ ವೈದ್ಯರು ವಸತಿಶಾಲೆಗೆ ಭೇಟಿ ನೀಡಬೇಕು’ ಎಂದು ಸೂಚನೆ ನೀಡಿದರು.
37 ವಿದ್ಯಾರ್ಥಿಗಳಲ್ಲಿ ಯಾವುದೇ ರೋಗಲಕ್ಷಣ ಇಲ್ಲದಿದ್ದರೂ ಕೊರೊನಾ ದೃಢಪಟ್ಟಿದೆ. 14 ದಿನಗಳ ಕಾಲ ವಸತಿ ಶಾಲೆಯ ಮಕ್ಕಳಿಗೆ ಶಾಲೆಯಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದು ವೈದ್ಯಾಧಿಕಾರಿ ತಿಳಿಸಿದರು.
ಆನಂದಪುರ: ಸಮೀಪದ ಇರುವಕ್ಕಿಯ ಮೆಟ್ರಿಕ್ ಪೂರ್ವ ಇಂದಿರಾ ವಸತಿ ಶಾಲೆಯ 40 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.