ADVERTISEMENT

ಎಲೆಚುಕ್ಕಿ ರೋಗಕ್ಕೆ ಪರಿಹಾರ ನೀಡಿ: ಕಿಮ್ಮನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 7:30 IST
Last Updated 10 ಅಕ್ಟೋಬರ್ 2021, 7:30 IST
ಆಗುಂಬೆ ಹೋಬಳಿಯ ಎಲೆಚುಕ್ಕಿ ರೋಗ ತಗುಲಿದ ಅಡಿಕೆ ತೋಟವನ್ನು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ ವೀಕ್ಷಿಸಿ, ರೈತರಿಂದ ಮಾಹಿತಿ ಪಡೆದರು
ಆಗುಂಬೆ ಹೋಬಳಿಯ ಎಲೆಚುಕ್ಕಿ ರೋಗ ತಗುಲಿದ ಅಡಿಕೆ ತೋಟವನ್ನು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ ವೀಕ್ಷಿಸಿ, ರೈತರಿಂದ ಮಾಹಿತಿ ಪಡೆದರು   

ತೀರ್ಥಹಳ್ಳಿ: ಎಲೆಚುಕ್ಕಿ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಸರ್ಕಾರ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ರೈತರಿಗೆ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ ಒತ್ತಾಯಿಸಿದರು.

ಆಗುಂಬೆ ಹೋಬಳಿಯ ನಾಲೂರು, ಇಳಿಮನೆ, ಬಿದರಗೋಡು, ತಲ್ಲೂರಂಗಡಿ, ಮಲ್ಲಂದೂರಿನ ಎಲೆಚುಕ್ಕಿ ರೋಗ ತಗುಲಿದ ಅಡಿಕೆ ತೋಟಗಳನ್ನು ವೀಕ್ಷಿಸಿ ಮಾತನಾಡಿದರು.

‘ಈಗಾಗಲೇ ಹಲವು ರೋಗಗಳಿಂದ ಮಲೆನಾಡಿನ ರೈತರು ಕಂಗಾಲಾಗಿದ್ದಾರೆ. ಈಗ ಬಂದಿರುವ ರೋಗದಿಂದ ಅನೇಕ ತೋಟ ಹಾಳಾಗಿದೆ. ಎಲೆಚುಕ್ಕಿ ರೋಗ ನಿಯಂತ್ರಿಸಲು ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಬೇಕು. ರೈತರಿಗೆ ಸೂಕ್ತವಾದ ಪರಿಹಾರ ನೀಡಲು ಒತ್ತಾಯಿಸುತ್ತೇನೆ’ ಎಂದು ರೈತರಿಗೆ ಭರವಸೆ ನೀಡಿದರು.

ADVERTISEMENT

ತಾಲ್ಲೂಕು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೆಸ್ತೂರು ಮಂಜುನಾಥ್, ಎಪಿಎಂಸಿ ನಿರ್ದೇಶಕ ಹಸಿರುಮನೆ ಮಹಾಬಲೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹೊಸಳ್ಳಿ ಸುಧಾಕರ್, ಮುಖಂಡರಾದ ಹೊಸೂರು ಗಿರೀಶ್ ಹೆಗ್ಡೆ ಇದ್ದರು.

ಸಾರಾಂಶ

ಎಲೆಚುಕ್ಕಿ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಸರ್ಕಾರ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ರೈತರಿಗೆ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.