ಸಾಗರ: ನಗರದ ಜೋಗ ರಸ್ತೆಯಲ್ಲಿ ಕಳೆದ ಜೂನ್ ತಿಂಗಳಲ್ಲಿ ಆರಂಭಗೊಂಡು ಕೆಲವು ತಿಂಗಳ ನಂತರ ಬಾಗಿಲು ಮುಚ್ಚಿದ್ದ ಇಂದಿರಾ ಕ್ಯಾಂಟೀನ್ ಗುರುವಾರದಿಂದ ಮತ್ತೆ ಆರಂಭಗೊಂಡಿದೆ.
ನಗರಸಭೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಚ್. ಹಾಲಪ್ಪ ಹರತಾಳು ಚಾಲನೆ ನೀಡಿದರು.
‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ. ಈ ಕಾರಣಕ್ಕಾಗಿ ಸರ್ಕಾರ ಕಳೆದ ಎರಡು ವರ್ಷ ಬಡವರಿಗೆ ಉಚಿತವಾಗಿ ಪಡಿತರ ಅಕ್ಕಿ ವಿತರಿಸಿದೆ. ಕಳೆದ ವರ್ಷ ಆರಂಭಗೊಂಡಿದ್ದ ಇಂದಿರಾ ಕ್ಯಾಂಟೀನ್ ಅನ್ನು ಅನಿವಾರ್ಯ ಕಾರಣಗಳಿಂದ ಮುಚ್ಚಲಾಗಿತ್ತು. ಸಾರ್ವಜನಿಕರ ಒತ್ತಾಯದ ಮೇರೆಗೆ ಮತ್ತೆ ತೆರೆಯಲಾಗಿದೆ. ಇದರ ಪ್ರಯೋಜನ ಅರ್ಹರಿಗೆ ತಲುಪಬೇಕಿದೆ’ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ‘ಇಂದಿರಾ ಕ್ಯಾಂಟೀನ್ ನಿರ್ವಹಣೆಯನ್ನು ನಗರಸಭೆ ಮಾಡಲಿದೆ. ಕೋವಿಡ್ ಮೂರನೇ ಅಲೆ ಆರಂಭವಾಗಿರುವ ಕಾರಣ ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಪ್ರಯೋಜನವಾಗಲಿ ಎಂದು ಪುನರಾರಂಭ ಮಾಡಲಾಗಿದೆ’ ಎಂದು ಹೇಳಿದರು.
ನಗರಸಭೆ ಉಪಾಧ್ಯಕ್ಷ ವಿ.ಮಹೇಶ್, ಸದಸ್ಯರಾದ ಟಿ.ಡಿ.ಮೇಘರಾಜ್, ಕೆ.ಆರ್.ಗಣೇಶ್ ಪ್ರಸಾದ್, ಮೈತ್ರಿ ಪಾಟೀಲ್, ಸೈಯದ್ ಜಾಕೀರ್, ಪ್ರೇಮಾ ಕಿರಣ್ ಸಿಂಗ್, ಬಿ.ಎಚ್.ಲಿಂಗರಾಜು, ಸವಿತಾ ವಾಸು, ಸಂತೋಷ್ ಆರ್.ಶೇಟ್, ಪುರುಷೋತ್ತಮ್, ಡಿ.ತುಕಾರಾಮ್ ಇದ್ದರು.
ರೇಣುಕಾ ಮೂರ್ತಿ ಪ್ರಾರ್ಥಿಸಿದರು. ನಾದಿರಾ ಫರ್ವೀನ್ ಸ್ವಾಗತಿಸಿದರು. ವೆಂಕಟೇಶ್ ವಂದಿಸಿದರು. ಸತೀಶ್ ಕೆ. ನಿರೂಪಿಸಿದರು.
ಸಾಗರ: ನಗರದ ಜೋಗ ರಸ್ತೆಯಲ್ಲಿ ಕಳೆದ ಜೂನ್ ತಿಂಗಳಲ್ಲಿ ಆರಂಭಗೊಂಡು ಕೆಲವು ತಿಂಗಳ ನಂತರ ಬಾಗಿಲು ಮುಚ್ಚಿದ್ದ ಇಂದಿರಾ ಕ್ಯಾಂಟೀನ್ ಗುರುವಾರದಿಂದ ಮತ್ತೆ ಆರಂಭಗೊಂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.