ಪ್ರಜಾವಾಣಿ ವಾರ್ತೆ
ಗುಬ್ಬಿ: ವಿಕಸಿತ ಭಾರತ ಅಭಿಯಾನದ ಅಡಿ ತಾಲ್ಲೂಕಿನ ಹಿಂಡಿಸಗೆರೆ ಗ್ರಾಮದಲ್ಲಿ ಎಸ್‌ಬಿಐ ಬ್ಯಾಂಕ್ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಮಂಗಳವಾರ ಕಾರ್ಯಕ್ರಮ ನಡೆಯಿತು.
ಸರ್ಕಾರದ ವಿವಿಧ ಯೋಜನೆ ಅಡಿಯಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ದೊರಕುವ ಸಾಲ ಪಡೆದುಕೊಂಡು ಅದನ್ನು ವ್ಯವಸ್ಥಿತವಾಗಿ ಬಳಸಿಕೊಂಡಲ್ಲಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯ. ಸಾಲ ತೆಗೆದುಕೊಳ್ಳುವಾಗಿನ ಉತ್ಸುಕತೆ ಸಾಲ ಹಿಂದಿರುಗಿಸುವಾಗಲೂ ಇರಬೇಕು ಎಂದು ಬ್ಯಾಂಕ್ ಅಧಿಕಾರಿಗಳು ಸಲಹೆ ನೀಡಿದರು.
ಇತ್ತೀಚೆಗೆ ಸ್ವಸಹಾಯ ಸಂಘಗಳಿಗೆ ಬ್ಯಾಂಕ್‌ಗಳು ಸಾಲ ವಿತರಿಸುತ್ತಿರುವುದರಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಯಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ, ಅಭಿವೃದ್ಧಿ ಅಧಿಕಾರಿ, ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ, ಸ್ವಸಹಾಯ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.