ADVERTISEMENT

ಉಡುಪಿ: 4253 ಯುವ ಮತದಾರರ ನೋಂದಣಿ

ಅಂತಿಮ ಮತದಾರರ ಪಟ್ಟಿಯ ಪ್ರತಿ ಹಸ್ತಾಂತರಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 13:51 IST
Last Updated 21 ಜನವರಿ 2022, 13:51 IST
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಹಸ್ತಾಂತರಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಹಸ್ತಾಂತರಿಸಿದರು.   

ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭ ಜಿಲ್ಲೆಯಲ್ಲಿ 4,253 ಯುವ ಮತದಾರರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 4,87,676 ಪುರುಷರು, 5,25,155 ಮಹಿಳಾ ಮತದಾರರು ಹಾಗೂ 11 ಮಂದಿ ಇತರರು ಸೇರಿ 10,12,842 ಮತದಾರರಿದ್ದಾರೆ. ಈ ಬಾರಿಯ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಹೆಸರು ಸೇರ್ಪಡೆಗೆ 7,862, ಹೆಸರು ತೆಗೆದು ಹಾಕಲು 16,815, ತಿದ್ದುಪಡಿಗೆ 2,962, ವಿಧಾನಸಭಾ ವ್ಯಾಪ್ತಿ ಬದಲಾವಣೆಗೆ 552 ಅರ್ಜಿಗಳು ಸ್ವೀಕೃತವಾಗಿದ್ದವು. 4,253 ಯುವ ಮತದಾರರು ನೋಂದಣಿಯಾಗಿದ್ದಾರೆ ಎಂದರು.

ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ 4 ದಿನಗಳ ವಿಶೇಷ ಅಭಿಯಾನ ನಡೆಸಲಾಗಿತ್ತು. ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮ ನಡೆಸುವ ಸಂದರ್ಭದಲ್ಲಿಯೂ ಅರಿವು ಮೂಡಿಸಲಾಗಿತ್ತು. ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ (1950) ಕೇಂದ್ರದಿಂದ ಮತದಾರರಿಗೆ ಅಗತ್ಯ ಮಾಹಿತಿ ನೀಡಲಾಗಿತ್ತು ಎಂದರು.

ADVERTISEMENT

ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಜಿಲ್ಲಾಧಿಕಾರಿ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಮತ್ತು ಸಿಪಿಐ(ಎಂ) ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಸಾರಾಂಶ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭ ಜಿಲ್ಲೆಯಲ್ಲಿ 4,253 ಯುವ ಮತದಾರರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.