ಶಿರಸಿ: ನಗರದ ಬಶೆಟ್ಟಿಕೆರೆಗೆ ಕಾಯಕಲ್ಪ ನೀಡಿ ಅದನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಆದ್ಯತೆ ನೀಡಲಾಗುವುದು ಎಂದು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಭರವಸೆ ನೀಡಿದರು.
ಅಧಿಕಾರಿಗಳು, ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಅವರ ಜತೆ ಸೋಮವಾರ ಕೆರೆಯ ಸ್ಥಿತಿಗತಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ‘ಕಸ್ತೂರಬಾ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಈ ಕೆರೆ ಜಲಪಾತ್ರೆ ಎನಿಸಿದೆ. ಈಚಿನ ವರ್ಷದಲ್ಲಿ ಒತ್ತುವರಿ, ನಿರ್ವಹಣೆಯ ಕೊರತೆ ಕಾರಣಕ್ಕೆ ಕೆರೆ ಸೊರಗಿದೆ’ ಎಂದರು.
‘ಬಶೆಟ್ಟಿಕೆರೆ ಅಭಿವೃದ್ಧಿಪಡಿಸಲು ಜೀವಜಲ ಕಾರ್ಯಪಡೆ ಮುಂದೆ ಬಂದಿದೆ. ನಗರಸಭೆಯಿಂದಲೂ ಅಗತ್ಯ ಸಹಕಾರ ನೀಡಲಾಗುತ್ತದೆ. ಕೆರೆ ಹೂಳೆತ್ತಿಸುವ ಕೆಲಸ ಮಾಡಲಾಗುವುದು. ಬಳಿಕ ಅಲ್ಲಿ ಅಗತ್ಯ ಸೌಕರ್ಯಗಳನ್ನು ಒದಗಿಸುತ್ತೇವೆ’ ಎಂದರು.
ಉಪಾಧ್ಯಕ್ಷೆ ವೀಣಾ ಶೆಟ್ಟಿ, ಎಇಇ ಜಗದೀಶ, ಪರಿಸರ ಎಂಜಿನಿಯರ್ ನಾರಾಯಣ ನಾಯಕ ಇದ್ದರು.
ಶಿರಸಿ ನಗರದ ಬಶೆಟ್ಟಿಕೆರೆಗೆ ಕಾಯಕಲ್ಪ ನೀಡಿ ಅದನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಆದ್ಯತೆ ನೀಡಲಾಗುವುದು ಎಂದು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಭರವಸೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.