ADVERTISEMENT

ಎಎಪಿ ವಿಜಯನಗರ ಜಿಲ್ಲಾಧ್ಯಕ್ಷರ ರಾಜೀನಾಮೆ ಅಂಗೀಕರಿಸಿಲ್ಲ: ಹನುಮಂತಪ್ಪ

ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಹನುಮಂತಪ್ಪ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2023, 9:05 IST
Last Updated 23 ಏಪ್ರಿಲ್ 2023, 9:05 IST
<div class="paragraphs"><p>ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಹನುಮಂತಪ್ಪ ಮಾತನಾಡಿದರು</p></div>

ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಹನುಮಂತಪ್ಪ ಮಾತನಾಡಿದರು

   

ಹೊಸಪೇಟೆ (ವಿಜಯನಗರ): ‘ಇತ್ತೀಚೆಗೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ‘ಆಮ್‌ ಆದ್ಮಿ’ ಪಕ್ಷದ (ಎಎಪಿ) ಜಿಲ್ಲಾ ಅಧ್ಯಕ್ಷ ಜೆ.ಎನ್‌. ಕಾಳಿದಾಸ್‌ ಅವರ ರಾಜೀನಾಮೆ ಪಕ್ಷ ಅಂಗೀಕರಿಸಿಲ್ಲ. ಪಕ್ಷದಲ್ಲಿ ಸಣ್ಣಪುಟ್ಟ ವ್ಯತ್ಯಾಸ ಆಗಿದ್ದು, ಅದನ್ನು ಸರಿಪಡಿಸಿದ್ದು, ಅದೇ ಸ್ಥಾನದಲ್ಲಿ ಮುಂದುವರೆಯುವಂತೆ ಅವರ ಮನವೊಲಿಸಲಾಗಿದೆ’ ಎಂದು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಹನುಮಂತಪ್ಪ ತಿಳಿಸಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಿಬೊಮ್ಮನಹಳ್ಳಿಯಲ್ಲಿ ನನಗೆ ಪಕ್ಷ ‘ಬಿ’ ಫಾರಂ ನೀಡಿತ್ತು. ಬಳಿಕ ತಿಪ್ಪೇಸ್ವಾಮಿ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ, ಅವರ ನಾಮಪತ್ರ ತಿರಸ್ಕೃತಗೊಂಡಿದೆ. ನಾನು ಕೂಡ ಪಕ್ಷದ ನಿರ್ಧಾರಕ್ಕೆ ಬೇಸತ್ತು ಪಕ್ಷೇತರನಾಗಿ ಕಣಕ್ಕಿಳಿಯಲು ಮುಂದಾಗಿದ್ದೆ. ಆದರೆ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ಅವರು ಕರೆ ಮಾಡಿ, ನಡೆದ ಎಲ್ಲ ಬೆಳವಣಿಗೆಗಳ ಬಗ್ಗೆ ಕ್ಷಮೆ ಕೇಳಿದ್ದಾರೆ. ಹಾಗಾಗಿ ಎಎಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಕಾಳಿದಾಸ್‌ ಕೂಡ ಜಿಲ್ಲಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ADVERTISEMENT

ಹಲವು ತಿಂಗಳಿಂದ ಹಗರಿಬೊಮ್ಮನಹಳ್ಳಿಯಲ್ಲಿ ಪಕ್ಷದ ಸಂಘಟನೆಗೆ ಕೆಲಸ ಮಾಡಿದ್ದೇನೆ. ಚುನಾವಣೆಯಲ್ಲಿ ಗೆದ್ದರೆ ಭ್ರಷ್ಟಾಚಾರರಹಿತ ಆಡಳಿತ ಕೊಡುವ ಭರವಸೆ ಕೊಟ್ಟಿದ್ದೇನೆ. ಮತದಾರರು ಬೆಂಬಲಿಸುವ ಭರವಸೆ ಇದೆ ಎಂದು ಹೇಳಿದರು.

ಎಎಪಿ ಮುಖಂಡರಾದ ಕೊಟ್ರೇಶ್‌, ಶಬ್ಬೀರ್‌, ಜೋಗಿ ರೇವಣ್ಣ, ಶಶಿಧರ್‌, ನಿತಿನ್‌ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.